Breaking News

94 ಪರೀಕ್ಷಾ ಕೇಂದ್ರಗಳು, 23 ಸಾವಿರ ವಿದ್ಯಾರ್ಥಿಗಳು ಸೇರಿದಂತೆ ಜಿಲ್ಲೆಯಲ್ಲಿ SSLC ಪರೀಕ್ಷೆಗೆ ಸಕಲ ಸಿದ್ದತೆ.

Cnewstv / 26.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

94 ಪರೀಕ್ಷಾ ಕೇಂದ್ರಗಳು, 23 ಸಾವಿರ ವಿದ್ಯಾರ್ಥಿಗಳು ಸೇರಿದಂತೆ ಜಿಲ್ಲೆಯಲ್ಲಿ SSLC ಪರೀಕ್ಷೆಗೆ ಸಕಲ ಸಿದ್ದತೆ.

ಶಿವಮೊಗ್ಗ : ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಜಿಲ್ಲೆಯ ಒಟ್ಟು 94 ಪರೀಕ್ಷಾ ಕೇಂದ್ರಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ.

ಒಟ್ಟು 94 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಅದರಲ್ಲಿ 02 ಖಾಸಗಿ ಪರೀಕ್ಷಾ ಕೇಂದ್ರಗಳಿವೆ. ಒಟ್ಟು 23372 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, 22068 ರೆಗ್ಯೂಲರ್ ವಿದ್ಯಾರ್ಥಿಗಳು, 814 ಪುನರಾವರ್ತಿತ ವಿದ್ಯಾರ್ಥಿಗಳು, 357 ಖಾಸಗಿಯಾಗಿ ನೊಂದಾಯಿಸಿ ವಿದ್ಯಾರ್ಥಿಗಳು, 133 ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ.

94 ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು, 94 ಮುಖ್ಯ ಅಧೀಕ್ಷಕರು, 31 ಅನ್ಯ ಇಲಾಖಾ ಅಧಿಕಾರಿಗಳನ್ನು ವೀಕ್ಷಕರಾಗಿ ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ 33 ಮಾರ್ಗಗಳನ್ನು ರಚಿಸಲಾಗಿದ್ದು, 33 ಜನ ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ವಿದ್ಯಾರ್ಥಿಗಳ ಸಂಖ್ಯೆ 350 ಕ್ಕೂ ಹೆಚ್ಚು ಇರುವ ಕಡೆ ಉಪ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 11 ಉಪ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ.ಫಾಸಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಒಳಗೆ ಮೊಬೈಲ್ ಇನ್ನಿತರೆ ಎಲೆಕ್ಟ್ರಾನಿಕ್ ವಸ್ತುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕರ್ತವ್ಯ ನಿರತ ಅಧಿಕಾರಿ/ಸಿಬ್ಬಂದಿಗಳು ಅತ್ಯಂತ ಮುತುವರ್ಜಿಯಿಂದ ಪರೀಕ್ಷಾ ಕರ್ತವ್ಯವನ್ನು ನಿರ್ವಹಿಸಬೇಕು. ಶಿಕ್ಷಕರು ವಿದ್ಯಾರ್ಥಿಗಳಿಗೆ ಪರೀಕ್ಷಾ ವೇಳಾಪಟ್ಟಿ, ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹಾಜರಿರಬೇಕಾದ ಸಮಯ ಮತ್ತಿತರೆ ಸೂಚನೆಗಳ ಕುರಿತು ತಿಳುವಳಿಕೆ ನೀಡಬೇಕು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*