Breaking News

ಬಿಎಸ್ ಯಡಿಯೂರಪ್ಪ ಮನೆ ಮೇಲೆ ಕಲ್ಲು ಚಪ್ಪಲಿ ತೂರಾಟ, ಟಯರ್‌ಗಳಿಗೆ ಬೆಂಕಿ.

Cnewstv / 27.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಬಿಎಸ್ ಯಡಿಯೂರಪ್ಪ ಮನೆ ಮೇಲೆ ಕಲ್ಲು ಚಪ್ಪಲಿ ತೂರಾಟ, ಟಯರ್‌ಗಳಿಗೆ ಬೆಂಕಿ.

ಶಿವಮೊಗ್ಗ : ಇಂದು ಮಧ್ಯಾಹ್ನ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಮನೆಯ ಮೇಲೆ ಕಲ್ಲು ಚಪ್ಪಲಿ ತೂರಾಟ ನಡೆಸಲಾಗಿದೆ.

ಮೀಸಲಾತಿ ಕಡಿತ ಖಂಡಿತ ನಡೆಯುತ್ತಿದ್ದ ಹೋರಾಟ ಎಂದು ಶಿಕಾರಿಪುರದಲ್ಲಿ ತೀವ್ರ ಸ್ವರೂಪಕ್ಕೆ ತಿರುಗಿದೆ. ಶಿಕಾರಿಪುರದ ಬಂಜಾರ ಸಮುದಾಯದವರು ಇಂದು ಅಂಬೇಡ್ಕರ್ ವೃತ್ತದಿಂದ ತಾಲೂಕು ಕಚೇರಿಯವರೆಗೂ ಪ್ರತಿಭಟನಾ ಮರವಣಿಗೆ ನಡೆಸಲಾಗಿತ್ತು ಈ ವೇಳೆ ಯಡಿಯೂರಪ್ಪನವರ ಮನೆಯತ್ತ ಕಲ್ಲು ತೂರಾಟ ನಡೆಸಿ, ಕಿಟಕಿ ಗಾಜುಗಳನ್ನು ಪುಡಿಪುಡಿ ಮಾಡಿ, ಟಯರ್‌ಗಳಿಗೆ ಬೆಂಕಿ ಹಚ್ಚಿದ್ದಾರೆ.

ಬಿಜೆಪಿ ಸರ್ಕಾರ ಹಾಗೂ ಮೋದಿಯ ವಿರುದ್ಧ ಘೋಷಣೆಗಳನ್ನು ಕೂಗಿ, ರಸ್ತೆಯಲ್ಲಿ ಹಾಕಲಾಗಿದ್ದ ಬಿಜೆಪಿ ಬ್ಯಾನರ್ ಗಳನ್ನು ಫ್ಲೆಕ್ಸ್ ಗಳನ್ನ ಕಿತ್ತು ಹಾಕಿದ್ದಾರೆ.‌ ಈ ಘಟನೆಗಳಿಂದಾಗಿ ಶಿಕಾರಿಪುರದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*