ರಾಜ್ಯದಲ್ಲಿನ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ನವೆಂಬರ್ 3 ರಂದು ನಡೆಯಲಿದೆ ಹಾಗು ನ. 6ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಓ.ಪಿ. ರಾವತ್,ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.
ಚುನಾವಣೆಗೆ ಸಂಬಂಧಿಸಿದಂತೆ ಅಕ್ಟೋಬರ್ 9ರಂದು ಅಧಿಸೂಚನೆ ಪ್ರಕಟವಾಗಲಿದೆ. ಶಿವಮೊಗ್ಗ, ಮಂಡ್ಯ, ಬಳ್ಳಾರಿ ಲೋಕಸಭೆ ಕ್ಷೇತ್ರಗಳಿಗೆ ಮತ್ತು ರಾಮನಗರ ಹಾಗೂ ಜಮಖಂಡಿ ವಿಧಾನಸಭೆ ಕ್ಷೇತ್ರಗಳಿಗೆ ನವೆಂಬರ್ 3ರಂದು ಉಪ ಚುನಾವಣೆ ನಡೆಯಲಿದೆ.. ಅ.16 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅ. 17ರಂದು ನಾಮಪತ್ರಗಳ ಪರಿಶೀಲನೆ ಮಾಡಲಾಗುವುದು. ಅ. 20ರಂದು ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳಲು ಕೊನೆಯ ದಿನವಾಗಿದೆ. ನ. 6ರಂದು ಫಲಿತಾಂಶ ಪ್ರಕಟವಾಗಲಿದೆ.
C News TV Kannada News Online in cnewstv