Breaking News

ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ..

Cnewstv / 29.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ..

ನವದೆಹಲಿ : ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಲು ಕೆಲವೇ ಕ್ಷಣಗಳು ಬಾಕಿ ಉಳಿದಿದೆ. ಚುನಾವಣಾ ಆಯೋಗವು ಇಂದು ಬೆಳಗ್ಗೆ 11:30 ಕ್ಕೆ ಸುದ್ದಿಗೋಷ್ಠಿಯನ್ನು ಕರೆದಿದ್ದಾರೆ.

ಕಳೆದ ಬಾರಿ ಮೇ ಎರಡನೇ ವಾರದಲ್ಲಿ ಚುನಾವಣೆ ನಡೆದಿತ್ತು ಹಾಗಾಗಿ ಈ ಬಾರಿಯೂ ಕೂಡ ಮೇ ಎರಡನೇ ವಾರದಲ್ಲಿ ಚುನಾವಣೆ ನಡೆಯಬಹುದು ಎಂದು ಅಂದಾಜಿಸಲಾಗಿದೆ. ರಾಜ್ಯದ ಒಟ್ಟು 224 ಕ್ಷೇತ್ರಗಳ ಚುನಾವಣೆಗೆ ಇಂದು ದಿನಾಂಕ ಘೋಷಣೆಯಾಗಲಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿದ್ದು, ಬಿಜೆಪಿಯು ಚುನಾವಣಾ ದಿನಾಂಕ ಘೋಷಣೆಯ ನಂತರ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಬಹುದು.

ಚುನಾವಣಾ ದಿನಾಂಕ ನಿಗದಿಯಾದ ತಕ್ಷಣವೇ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*