Cnewstv / 30.03.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಕಾಂಗ್ರೆಸ್ ಪಕ್ಷ ನನಗೆ ಟಿಕೆಟ್ ನೀಡಬಹುದೆಂಬ ನಿರೀಕ್ಷೆ ಇದೆ.
ಶಿವಮೊಗ್ಗ : ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ನಾನೂ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದು, ಕಾಂಗ್ರೆಸ್ ಪಕ್ಷ ನನಗೆ ಟಿಕೆಟ್ ನೀಡಬಹುದೆಂಬ ನಿರೀಕ್ಷೆ ಇದೆ ಎಂದು ಕೆಪಿಸಿಸಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷಿ ವೈ.ಹೆಚ್. ನಾಗರಾಜ್ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಹನ್ನೊಂದು ಜನರು ಟಿಕೆಟ್ ಬಯಸಿ ಅರ್ಜಿ ಹಾಕಿದ್ದೇವೆ. ಈಗಾಗಲೇ ಪಕ್ಷದಿಂದ ಸರ್ವೆ ಕಾರ್ಯ ಕೂಡ ನಡೆದಿದೆ. ನಾನೂ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದು, ಕಾಂಗ್ರೆಸ್ ಪಕ್ಷ ನನಗೆ ಟಿಕೆಟ್ ನೀಡಬಹುದೆಂಬ ನಿರೀಕ್ಷೆ ಇದೆ.ಆದರೆ ಯಾರಿಗೇ ಟಿಕೆಟ್ ಕೊಟ್ಟರೂ ಕೂಡ ಪಕ್ಷದ ಪರವಾಗಿ ಕೆಲಸ ಮಾಡುವೆ.
ಯಾರಿಗೆ ಟಿಕೆಟ್ ಕೊಡಬೇಕೆಂದು ಹೈಕಮಾಂಡ್ ನಿರ್ಧರಿಸಲಿದೆ. ನಾನೂ ಕೂಡ ಟಿಕೆಟ್ ನೀಡಿದರೆ ಹೇಗೆ ಗೆಲ್ಲಬಹುದು ಎಂಬ ಲೆಕ್ಕಾಚಾರವನ್ನು ಮುಖಂಡರಿಗೆ ತಿಳಿಸಿದ್ದೇನೆ ಈ ಬಾರಿ ಕಾಂಗ್ರೆಸ್ ಗೆಲ್ಲುವ ಅವಕಾಶ ಹೆಚ್ಚಿದೆ. ಸಹಜವಾಗಿಯೇ ಆಕಾಂಕ್ಷಿಗಳ ಸಂಖ್ಯೆ ಕೂಡ ಹೆಚ್ಚಾಗಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv