Cnewstv / 31.03.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳಿಂದ ದಿಢೀರ್ ಚೆಕ್ ಪೋಸ್ಟ್ ಗಳ ಪರಿಶೀಲನೆ.
ಶಿವಮೊಗ್ಗ : ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳಿಂದ ತಾಲೂಕಿನ ವಿವಿಧ ಚೆಕ್ ಪೋಸ್ಟ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ. ಜಿಲ್ಲಾಧಿಕಾರಿ ಡಾ. ಸೆಲ್ವಮಣಿಯವರು ನಿನ್ನೆ ರಾತ್ರಿ ಸಾಗರ ಚೆಕ್ ಪೋಸ್ಟ್, ಸುತ್ತುಕೋಟೆ ಚೆಕ್ ಪೋಸ್ಟ್, ಅತ್ತಿಬೈಲು ಚೆಕ್ ಪೋಸ್ಟ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಎಸ್ ಪಿ ಮಿಥುನ್ ಕುಮಾರ್, ಅನಿಲ್ ಕುಮಾರ್ ಭೂಮರಡ್ಡಿಯವರು ಶಿವಮೊಗ್ಗ ಜಿಲ್ಲೆಯ Static Surveillance Team ( ಚೆಕ್ ಪೋಸ್ಟ್ ) ಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಚೆಕ್ ಪೋಸ್ಟ್ ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸೂಚನೆಯನ್ನು ನೀಡಿದ್ದಾರೆ ಮತ್ತು ಪೊಲೀಸ್ ಉಪ ಅಧೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು, ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪ ನಿರೀಕ್ಷಕರುಗಳು ಸಹಾ ತಮ್ಮ ವ್ಯಾಪ್ತಿಯ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv