Cnewstv / 31.03.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ವಿನ್‌ಲೈಫ್ ಟ್ರಸ್ಟ್ : “ಆರೋಗ್ಯ ಉತ್ಸವ ಜನಜಾಗೃತಿ ಸಮಾವೇಶ”
ಮಧುಮೇಹ @ 360 ಹಾಗೂ ತುರ್ತು ಜೀವರಕ್ಷಕ ತರಬೇತಿ
ಶಿವಮೊಗ್ಗ : ವಿನ್‌ಲೈಫ್ ಟ್ರಸ್ಟ್ ವತಿಯಿಂದ ಆರೋಗ್ಯ ಉತ್ಸವ ಜನಜಾಗೃತಿ ಸಮಾವೇಶವನ್ನು ಏ.2 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ರವರೆಗೆ ಕುವೆಂಪುರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ವಿನ್‌ಲೈಫ್ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಮೆಟ್ರೋ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಪೃಥ್ವಿ ಬಿ.ಸಿ. ಹೇಳಿದರು.
ವಿನ್‌ಲೈಫ್, ಮೆಟ್ರೋ ಆಸ್ಪತ್ರೆ ಹಾಗೂ ಮಣಿಪಾಲ್ ಆಸ್ಪತ್ರೆ, ಬೆಂಗಳೂರು ಇವರ ಸಹಯೋಗದಲ್ಲಿ ತುರ್ತು ಜೀವರಕ್ಷಕ ತರಬೇತಿ ಮತ್ತು ಕಾರ್ಯಾಗಾರ ದೈನಂದಿನ ಬದುಕಿನಲ್ಲಿ ಒತ್ತಡ ನಿರ್ವಹಣೆ, ಮಧುಮೇಹ @ 360 ಎಂಬ ವಿಷಯಗಳ ಕುರಿತು ಅರಿವು ಮೂಡಿಸುವ ದೃಷ್ಟಿಯಿಂದ “ಆರೋಗ್ಯ ಉತ್ಸವ ಜನಜಾಗೃತಿ ಸಮಾವೇಶ” ಆಯೋಜಿಸಲಾಗಿದೆ ಎಂದರು.
ಸಮಾವೇಶದಲ್ಲಿ ಆರೋಗ್ಯ ಕುರಿತು ಪ್ರಾಯೋಗಿಕ ತರಬೇತಿ, ಕಾರ್ಯಾಗಾರ, ಯೋಗ, ವಸ್ತು ಪ್ರದರ್ಶನ, ಕಿರುನಾಟಕ ಪ್ರದರ್ಶನ, ಸಮಾಲೋಚನೆ ಹಾಗೂ ಉಪನ್ಯಾಸ ಏರ್ಪಡಿಸಲಾಗಿದೆ. ಎಲ್ಲರೂ ಈ ಆರೋಗ್ಯ ಉತ್ಸವದ ಸಮಾವೇಶದಲ್ಲಿ ಭಾಗವಹಿಸಿ ಹೆಚ್ಚಿನ ಅರಿವು ಪಡೆದುಕೊಳ್ಳಬೇಕಾಗಿ ವಿನಂತಿಸಿದರು. ಇದೊಂದು ಆರೋಗ್ಯದ ಜನಜಾಗೃತಿ ಸಮಾವೇಶವಾಗಿದೆ. ಆರೋಗ್ಯವು ನಮ್ಮ ನಮ್ಮ ಕೈಯಲ್ಲಿಯೇ ಇರುತ್ತದೆ. ಈ ಬಗ್ಗೆ ಅರಿವು ಮೂಡಿಸುವುದು ಇಂದಿನ ಅವಶ್ಯಕತೆಯಾಗಿದೆ. ಮಧುಮೇಹವನ್ನು ಕೂಡ ಎಲ್ಲಾ ಆಯಾಮದಲ್ಲೂ ಚಿಕಿತ್ಸೆ ಪಡೆದುಕೊಂಡರೆ 100 ವರ್ಷ ಬದುಕಲು ಸಾಧ್ಯವಾಗುತ್ತದೆ.
ಪತ್ರಿಕಾಗೋಷ್ಠಿಯಲ್ಲಿ ವಿನ್‌ಲೈಫ್‌ನ ನಿದೇಶಕರಾದ ಡಾ|| ಶಂಕರ್, ಡಾ|| ವಿಜಯ್‌ಕುಮಾರ್, ರೆಹಮತ್, ಬದ್ರಿನಾಥ್ ಉಪಸ್ಥಿತರಿದ್ದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv