Cnewstv / 01.4.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಒಂದೇ ದಿನ ಚೆಕ್ ಪೋಸ್ಟ್ ತಪಾಸಣೆ ವೇಳೆ ಸಿಕ್ತು ಕೋಟಿಗಟ್ಟಲೆ ಹಣ, ಸೀರೆ ಮತ್ತು ಅಕ್ಕಿ..
ಶಿವಮೊಗ್ಗ : ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆಯನ್ನು ನಡೆಸಲಾಗುತ್ತಿದೆ.
ಈ ವೇಳೆ ಒಂದೇ ದಿನ ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಮತ್ತು ಅನಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ವಸ್ತುಗಳು ಮತ್ತು ಕೋಟಿಗಟ್ಟಲೆ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಯಾವ ಯಾವ ಠಾಣಾ ವ್ಯಾಪ್ತಿಯಲ್ಲಿ ಎಷ್ಟೆಷ್ಟು ಅನಧಿಕೃತ ಹಣ ಮತ್ತು ವಸ್ತುಗಳನ್ನು ಸಂಗ್ರಹಿಸಲಾಗಿದೆ..
* ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಅನಧಿಕೃತವಾಗಿ ಸಂಗ್ರಹಿಸಿ ಇಟ್ಟಿದ್ದ ಅಂದಾಜು ಮೌಲ್ಯ ರೂ 4,50,00,000 ರೂಪಾಯಿಗಳ ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ.
* ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಬುಲೆರೋ ವಾಹನದಲ್ಲಿ ಸಾಗಿಸುತ್ತಿದ್ದ ರೂ 1,40,00,000 ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
* ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ ರೂ 20,00,000 ರೂಪಾಯಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
* ವಿನೋಬನಗರ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಒಟ್ಟು 100 ಬ್ಯಾಗ್ ಗಳಲ್ಲಿದ್ದ, ಅಂದಾಜು 1,56,000 ರೂ ಮೌಲ್ಯದ 26 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments