ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣಾ ದಿನಾಂಕ ನಿಗದಿಯಾದ ಹಿನ್ನಲೇಯಲ್ಲೇ , ಮಾದರಿ ನೀತಿ ಸಂಹಿತೆ ಇಂದಿನಿಂದಲೇ ಜಾರಿಯಾಗಲಿದೆ. ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಈಗಾಗಲೇ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜಕೀಯ ಪಕ್ಷಗಳು, ವ್ಯಕ್ತಿಗಳ ಪ್ರಚಾರದ ಬ್ಯಾನರ್, ಪೋಸ್ಟರ್ ಇತ್ಯಾದಿಗಳನ್ನು 24ಗಂಟೆಗಳ ಒಳಗಾಗಿ ತೆರವುಗೊಳಿಸಲು ಸೂಚನೆ ನೀಡಲಾಗಿದ್ದು, ಕಾರ್ಯ ಆರಂಭಿಸಲಾಗಿದೆ. ರಾಜಕೀಯ ಪಕ್ಷಗಳು ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸುವ ಪೂರ್ವದಲ್ಲಿ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ..ಮಾದರಿ ನೀತಿ ಸಂಹಿತೆ ಜಾರಿಗಾಗಿ ಈಗಾಗಲೇ ತಂಡಗಳನ್ನು ರಚಿಸಲಾಗಿದೆ. 162 ಸೆಕ್ಟರ್ ಅಧಿಕಾರಿಗಳು, 9 ಅಕೌಂಟಿಂಗ್ ತಂಡಗಳು, 39 ಫ್ಲೈಯಿಂಗ್ ಸ್ಕ್ವಾಡ್ಗಳು, 37 ಸ್ಟಾಟಿಕ್ ಸರ್ವೇಲೆನ್ಸ್ ತಂಡಗಳು, 8 ಮಾದರಿ ನೀತಿ ಸಂಹಿತೆ ಜಾರಿ ನೋಡಲ್ ಅಧಿಕಾರಿಗಳು, 27 ವಿಡಿಯೊ ಸರ್ವೇಲೆನ್ಸ್ ತಂಡಗಳು ಹಾಗೂ 7 ವಿಡಿಯೋ ವ್ಯೂವಿಂಗ್ ತಂಡಗಳನ್ನು ರಚಿಸಲಾಗಿದೆ..
ಬೈಂದೂರು ವಿಧಾನಸಭಾ ಕ್ಷೇತ್ರ ಸಹ ಶಿವಮೊಗ್ಗ ಲೋಕಸಭಾ ವ್ಯಾಪ್ತಿಗೆ ಬರುತ್ತಿದ್ದು, ಅಲ್ಲಿ 2,22,003 ಅರ್ಹ ಮತದಾರರು ಇದ್ದಾರೆ. ಇನ್ನುಳಿದಂತೆ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ 210997, ಭದ್ರಾವತಿ 206678, ಶಿವಮೊಗ್ಗ ನಗರ 256236, ತೀರ್ಥಹಳ್ಳಿ 182663, ಶಿಕಾರಿಪುರ 188684, ಸೊರಬ 184492, ಸಾಗರ 193758 ಸೇರಿದಂತೆ ಒಟ್ಟು 16,45,511 ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಹೇಳಿದರು.
C News TV Kannada News Online in cnewstv