Breaking News

ಕಿಚ್ಚ ಸುದೀಪ್ ಸಿನಿಮಾ, ಜಾಹೀರಾತು, ರಿಯಾಲಿಟಿ ಶೋ ಗೆ ಬ್ರೇಕ್ ಬೀಳುತ್ತಾ ? ಚುನಾವಣಾ ಆಯೋಗಕ್ಕೆ ಶಿವಮೊಗ್ಗ ವಕೀಲರಿಂದ ದೂರು.

Cnewstv / 06.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಕಿಚ್ಚ ಸುದೀಪ್ ಸಿನಿಮಾ, ಜಾಹೀರಾತು, ರಿಯಾಲಿಟಿ ಶೋ ಗೆ ಬ್ರೇಕ್ ಬೀಳುತ್ತಾ ? ಚುನಾವಣಾ ಆಯೋಗಕ್ಕೆ ಶಿವಮೊಗ್ಗ ವಕೀಲರಿಂದ ದೂರು.

ಶಿವಮೊಗ್ಗ : ಬಿಜೆಪಿ ಪಕ್ಷದ ಪರವಾಗಿ ಪ್ರಚಾರ ಮಾಡಲು ಹೊರಟಿರುವ ಸುದೀಪ್ ಗೆ ಶಿವಮೊಗ್ಗದ ವಕೀಲರೊಬ್ಬರು ಶಾಪ್ ನೀಡಿದ್ದಾರೆ‌‌

ಈ ಬಾರಿ ಅಧಿಕಾರಕ್ಕೆ ಬರಲೇಬೇಕು ಎಂದು ಬಿಜೆಪಿ ಸರ್ಕಾರವು ನಿರ್ಧರಿಸಿದ್ದು ಪ್ರಚಾರಕ್ಕೆ ಎಂದು ಸುದೀಪ್ ರವರನ್ನು ಕರೆ ತರುವುದರಲ್ಲಿ ಯಶಸ್ವಿಯಾಗಿದೆ. ನಟ ಸುದೀಪ್ ಬಿಜೆಪಿ ಪಕ್ಷ ಸೇರ್ಪಡೆಯಾಗದಿದ್ದರು ಪಕ್ಷದ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಹೇಳಿದ್ದರು.

ನೀತಿ ಸಂಹಿತೆ ಅನುಸಾರ ನಟ ಸುದೀಪ್ ಅಭಿನಯದ ಸಿನಿಮಾ ಜಾಹಿರಾತು ರಿಯಾಲಿಟಿ ಶೋಗಳನ್ನ ತಡೆ ಹಿಡಿಯುವಂತೆ ಶಿವಮೊಗ್ಗದ ವಕೀಲ ಕೆ ಪಿ‌ ಶ್ರೀಪಾಲ್ ರವರು ಚುನಾವಣಾ ಆಯೋಗಕ್ಕೆ‌ ದೂರು ನೀಡಿದ್ದಾರೆ.

ಪತ್ರದಲ್ಲಿ ಏನಿದೆ..

ಕನ್ನಡದ ಚಲನಚಿತ್ರನಟ ಮಾನ್ಯ ಕಿಚ್ಚ ಸುದೀಪ್ ರವರು ಭಾರತೀಯ ಜನತಾ ಪಕ್ಷದ ಸ್ಟಾರ್ ಪ್ರಚಾರಕರಾಗಿರುವುದರಿಂದ ಚುನಾವಣೆ ಮುಗಿಯುವ ವರೆಗೂ ಅವರ ನಟನೆಯ ಯಾವುದೇ ಚಲನ ಚಿತ್ರಗಳು ಚಿತ್ರ ಮಂದಿರಗಳಲ್ಲಿ ಮತ್ತು ಟಿ.ವಿ.ಗಳಲ್ಲಿ ಪ್ರದರ್ಶನವಾಗದಂತೆ, ಅವರು ನಡೆಸಿಕೊಡುವ ಟಿ.ವಿ.ಶೋಗಳು ಪ್ರಸಾರವಾಗದಂತೆ ಮತ್ತು ಅವರು ನಟಿಸಿರುವ ಜಾಯಿರಾತುಗಳು ಸಹ ಪ್ರಸಾರವಾಗದಂತೆ ಚುನಾವಣಾ ಆಯೋಗ ಕಟ್ಟು ನಿಟ್ಟಿನ ಕ್ರಮಜರುಗಿಸಬೇಕು.

ಅವರು ಒಂದು ರಾಜಕೀಯ ಪಕ್ಷದ ಪರವಾಗಿ ಪ್ರಚಾರಮಾಡುತ್ತಿರುವುದನ್ನು ಅವರೆ ಘೋಷಣೆ ಮಾಡಿದ್ದರಿಂದ ಅವರ ನಟನೆಯ ಚಲನ ಚಿತ್ರಗಳು, ಮತ್ತು ಟಿ.ವಿ.ಶೋಗಳು ಹಾಗೂ ಜಾಹಿರಾತುಗಳು ಮತದಾರರ ಮೇಲೆ ಪ್ರಭಾವ ಬೀರುವುದರಿಂದ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಆಗಿರುತ್ತದೆ, ಆದ್ದರಿಂದ ತಕ್ಷದಿಂದ ಚುನಾವಣಾ ಆಯೋಗ ಈ ವಿಷಯಕ್ಕೆ ಸಂಬಂದಿಸಿದಂತೆ ತುರ್ತು ಕ್ರಮ ಜರುಗಿಸಬೇಕೆಂದು, ಒಬ್ಬ ಜವಬ್ದಾರಿಯುತ ನಾಗರೀಕನಾಗಿ ಒತ್ತಾಯಿಸುತ್ತಿದ್ದೇನೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*