Breaking News

ಏ.13 ರಿಂದ ನಾಮಪತ್ರ ಸ್ವೀಕಾರ : ಚಂದ್ರಕುಮಾರ್.

Cnewstv / 11.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಏ.13 ರಿಂದ ನಾಮಪತ್ರ ಸ್ವೀಕಾರ : ಚಂದ್ರಕುಮಾರ್.

ಶಿವಮೊಗ್ಗ : ಏ 13 ರಿಂದ ನಾಮಪತ್ರಗಳನ್ನು ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಸ್ವೀಕರಿಸಲಾಗುವುದು ಎಂದು ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಹೆಚ್.ಎನ್.ಚಂದ್ರಕುಮಾರ್ ತಿಳಿಸಿದರು.

113 ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಅಧಿಸೂಚನೆಯನ್ನು ದಿನಾಂಕ 13-04-2023 (ಗುರುವಾರ)ರಂದು ಹೊರಡಿಸಲಾಗುತ್ತದೆ. ದಿನಾಂಕ 13-04-2023 ರಿಂದ 20-04-2023 ರವರೆಗೆ ನಿಯಮಾನುಸಾರ ಅಭ್ಯರ್ಥಿಗಳಿಂದ ನಾಮಪತ್ರಗಳನ್ನು ಪರಿಷತ್ ಸಭಾಂಗಣದಲ್ಲಿ ಸ್ವೀಕರಿಸಲಾಗುವುದು.

ಶಿವಮೊಗ್ಗ ವಿಧಾನಸಭಾ ಕ್ಷೇತ್ರ-113 ರಲ್ಲಿ 126568 ಪುರುಷ, 132334 ಮಹಿಳೆ ಮತ್ತು 14 ತೃತೀಯ ಲಿಂಗಿ ಸೇರಿದಂತೆ ಒಟ್ಟು 258916 ಮತದಾರರಿದ್ದಾರೆ.

ಹೆಚ್ಚುವರಿ ಮತದಾನ ಕೇಂದ್ರಗಳು : 113 ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ 286 ಮತದಾನ ಕೇಂದ್ರಗಳಿದ್ದು, 8 ಹೆಚ್ಚುವರಿ ಮತದಾನ ಕೇಂದ್ರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿರುತ್ತದೆ. ಆಯೋಗದಿಂದ ಅನುಮತಿ ದೊರೆತ ನಂತರದಲ್ಲಿ ಮತದಾನ ಕೇಂದ್ರಗಳನ್ನು ಸ್ಥಾಪಿಸಲು ಕ್ರಮಕೈಗೊಳ್ಳಲಾಗುತ್ತದೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*