Breaking News

ಕೆ ಎಸ್ ಈಶ್ವರಪ್ಪ ರಾಜೀನಾಮೆ ಹಿನ್ನೆಲೆ ಅಭಿಮಾನಿಗಳ ಬೇಸರ, ಟೈಯಾರಿಗೆ ಬೆಂಕಿ..

Cnewstv / 11.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಕೆ ಎಸ್ ಈಶ್ವರಪ್ಪ ರಾಜೀನಾಮೆ ಹಿನ್ನೆಲೆ ಅಭಿಮಾನಿಗಳ ಬೇಸರ, ಟೈಯಾರಿಗೆ ಬೆಂಕಿ..

ಶಿವಮೊಗ್ಗ : ಕೆ ಎಸ್ ಈಶ್ವರಪ್ಪನವರು ರಾಜಕೀಯ ಚುನಾವಣೆಗೆ ನಿವೃತ್ತಿ ಘೋಷಣೆ ಮಾಡಿದ ಪತ್ರ ವೈರಲ್ ಆದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಮತ್ತು ಕಾರ್ಯಕರ್ತರು ಮನೆಯ ಮುಂದೆ ಜಮಾಯಿಸುತ್ತಿದ್ದಾರೆ.

ಮತ್ತೊಂದೆಡೆ ಈಶ್ವರಪ್ಪನವರ ಮನೆ ಮುಂದೆ ಅಭಿಮಾನಿಗಳು ಟೈಯಾರಿಗೆ ಬೆಂಕಿ ಹಚ್ಚಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈಶ್ವರಪ್ಪನವರ ಪರವಾಗಿ ಘೋಷಣೆಗಳನ್ನು ಕೂಗುತ್ತಿದ್ದಾರೆ.

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪನವರ ಅಂತಿಮ ಎಂದು ಹೇಳಲಾಗುತ್ತಿತ್ತು ಆದರೆ ಇದೀಗ ಕೆ ಎಸ್ ಈಶ್ವರಪ್ಪನವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿರುವುದು ಬಾರಿ ಚರ್ಚೆಗೆ ಗ್ರಾಸವಾಗಿದೆ.

ಇಂದು ಸಂಜೆ ಬಿಜೆಪಿ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದ್ದು ಈ ಪಟ್ಟಿಯಲ್ಲಿ ಕೆ ಎಸ್ ಈಶ್ವರಪ್ಪನವರ ಪುತ್ರ ಕೆಇ ಕಾಂತೇಶ, ಡಾ.ಧನಂಜಯ್ ಸರ್ಜಿ, ಬಿ.ಕೆ ಹರಿಕೃಷ್ಣ, ಎಸ್ ಎಸ್ ಜ್ಯೋತಿಪ್ರಕಾಶ್ ರವರ ಹೆಸರುಗಳು ಕೇಳಿ ಬರುತ್ತಿದೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*