Breaking News

ಮಾಜಿ ಸೈನಿಕ ದೃಢೀಕರಣ ಪತ್ರ ಪಡೆಯಲು ಸೂಚನೆ.

Cnewstv / 12.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಮಾಜಿ ಸೈನಿಕ ದೃಢೀಕರಣ ಪತ್ರ ಪಡೆಯಲು ಸೂಚನೆ.

ಶಿವಮೊಗ್ಗ : ಸಿ.ಇ.ಟಿ/ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಮಾಜಿ ಸೈನಿಕ ಮೀಸಲಾತಿ ಕೋರಿರುವರು ಮಾಜಿ ಸೈನಿಕರ ಮಕ್ಕಳು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಮಾಜಿ ಸೈನಿಕ ದೃಢೀಕರಣ ಪತ್ರವನ್ನು ಪಡೆಯಬೇಕಾಗಿರುತ್ತದೆ ಹಾಗೂ ಈ ದೃಢೀಕರಣ ಪತ್ರವನ್ನು ವಿಶೇಷ ವರ್ಗ(ಸ್ಪೆಷಲ್ ಕೆಟಗರಿ)ಗಳ ದಾಖಲೆ ಮಂಡನೆ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.

ಪ್ರಸ್ತುತ ಸರ್ಕಾರಿ ನೌಕರರು/ಅಧಿಕಾರಿಗಳನ್ನು ಚುನಾವಣಾ ಕಾರ್ಯಗಳಲ್ಲಿ ಬಳಸಿಕೊಳ್ಳಬಹುದಾದ ಕಾರಣಗಳಿಂದ ಸಿ.ಇ.ಟಿ / ನೀಟ್ ನಲ್ಲಿ ಮಾಜಿ ಸೈನಿಕ(ಎಕ್ಸ್ ಡಿಫೆನ್ಸ್) ಮೀಸಲಾತಿ ಕೋರಿರುವ ಎಲ್ಲಾ ಮಾಜಿ ಸೈನಿಕರು ಕೊನೆಯ ದಿನಾಂಕದವರೆಗೆ ಕಾಯದೇ ಕೂಡಲೇ ಮಾಜಿ ಸೈನಿಕ ದೃಢೀಕರಣ ಪತ್ರವನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಿಂದ ಪಡೆದುಕೊಳ್ಳಲು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಚೇರಿಯ ದೂರವಾಣಿ ಸಂಖ್ಯೆ 08182-220925 ನ್ನು ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕ ಡಾ. ಸಿ.ಎ ಹಿರೇಮಠ ತಿಳಿಸಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*