Cnewstv / 15.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಬೃಹತ್ ಮೆರವಣಿಗೆ : ಹರತಾಳು ಹಾಲಪ್ಪ ನಾಮಪತ್ರ ಸಲ್ಲಿಕೆ. 23 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲ್ಲುತ್ತೇವೆ.
ಶಿವಮೊಗ್ಗ : ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿರುವ ಹರತಾಳು ಹಾಲಪ್ಪನವರು ಇಂದು ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿದರು ನಂತರ ಸಾವಿರಾರು ಅಭಿಮಾನಿಗಳ ಬೃಹತ್ ಮೆರವಣಿಗೆಯ ಮೂಲಕ ಸಾಗರ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ನಡೆಸಿದರು ನಂತರ ಸಾಗರದ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು ನಂತರ ಗಾಂಧಿ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಸಲಾಯಿತು.
ಮೆರವಣಿಗೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ ಡಿ ಮೇಘರಾಜ್, ಕಾಗೋಡು ತಿಮ್ಮಪ್ಪ ಪುತ್ರಿ ರಾಜ ನಂದಿನಿ, ಕೆ ಜೆ ಶಿವಪ್ಪ ಪುತ್ರ ಪ್ರಶಾಂತ್, ರತ್ನಾಕರ್ ಸೇರಿದಂತೆ ಸಾವಿರಾರು ಅಭಿಮಾನಿಗಳು ಉಪಸ್ಥಿತರಿದ್ದರು.
ಮೋದಿ, ಯಡಿಯೂರಪ್ಪ ನಾಯಕತ್ವದಲ್ಲಿ ಬಿಜೆಪಿ ಬೆಳೆಯುತ್ತಿದೆ. ಆ ಪಕ್ಷದ ಕಾರ್ಯಕರ್ತ ಎಂಬ ಹೆಮ್ಮೆ ಇದೆ.
ನನಗೆ ಮತ್ತೊಮ್ಮೆ ಅವಕಾಶ ಕೊಟ್ಟಿದ್ದಕ್ಜೆ ಧನ್ಯವಾದ ಒಳ್ಳೆಯ ಆಡಳಿತ, ಅಭಿವೃದ್ಧಿ ಮಾಡಿದ್ದೇವೆ. ಹೀಗಾಗಿ ಬಿಜೆಪಿ ಬೆಂಬಲಿಸುವಂತೆ ಜನರ ಬಳಿ ಹೋಗುತ್ತಿದ್ದೇನೆ. ಮಲೆನಾಡಿನ ರೈತರ ಸಮಸ್ಯೆ ಇದೆ ಅದರ ವಿರುದ್ಧ ಜನರ ಪರವಾಗಿ ಧ್ವನಿ ಎತ್ತುತ್ತೇನೆ. ಡಾ.ರಾಜನಂದಿನಿ ಬಿಜೆಪಿ ಸೇರ್ಪಡೆ ವಿಚಾರ
ಅವರು ಪಕ್ಷಕ್ಕೆ ಬಂದಿರುವುದು ಬಲ ಬಂದಿದೆ. 23 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲ್ಲುತ್ತೇವೆ.
– ಶಾಸಕ ಹರತಾಳು ಹಾಲಪ್ಪ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv