Cnewstv / 16.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಶಿವಮೊಗ್ಗ ನಗರ ಕಾಂಗ್ರೆಸ್ ನಲ್ಲಿ ಬುಗಿಲೆದ್ದ ಅಸಮಾಧಾನ.. ಆಕಾಂಕ್ಷಿ ಅಭ್ಯರ್ಥಿಗಳ ಬೆಂಬಲಿಗರಿಗಳಿಂದ ಅಕ್ರೋಶ..
ಶಿವಮೊಗ್ಗ : ಬಹಳ ಕುತೂಹಲ ಕೆರಳಿಸಿದಂತಹ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಶಿವಮೊಗ್ಗ ನಗರ ಕಾಂಗ್ರೆಸ್ ಅಭ್ಯರ್ಥಿಯಾಗಿ ಹೆಚ್ ಸಿ ಯೋಗೇಶ್ ಅವರ ಹೆಸರನ್ನು ನೆನ್ನೆ ಪ್ರಕಟ ಮಾಡಲಾಗಿದೆ.
ಇಂದು ಕಾಂಗ್ರೇಸ್ ಆಕಾಂಕ್ಷಿ ಅಭ್ಯರ್ಥಿಗಳ ಅಭಿಮಾನಿಗಳು ಟೈಯಾರಿಗೆ ಬೆಂಕಿ ಹಚ್ಚಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಅಭ್ಯರ್ಥಿ ಆಯ್ಕೆಯನ್ನು ಮರುಪರಿಶೀಲನೆ ಮಾಡವಂತೆ ಒತ್ತಾಯಿಸಿದ್ದಾರೆ.
ಶಿವಮೊಗ್ಗ ನಗರ ಆಕಾಂಕ್ಷಿಯಾಗಿದ್ದಂತಹ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಎಚ್ ಎಸ್ ಸುಂದರೇಶ್ ರವರ ಅಭಿಮಾನಿಗಳು ಜಿಲ್ಲಾ ಕಾಂಗ್ರೆಸ್ ಕಚೇರಿಯ ಮುಂದೆ ಟೈಯಾರಿಗೆ ಬೆಂಕಿ ಹಚ್ಚಿ, ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.
ಮಾಜಿ ಶಾಸಕ ಕೆ ಬಿ ಪ್ರಸನ್ನಕುಮಾರ್ ಅಭಿಮಾನಿಗಳು ಇಂದು ಅಶೋಕನಗರದಲ್ಲಿರುವ ಅವರ ಮನೆ ಮುಂದೆ ಅಭಿಮಾನಿಗಳು ಟೈಯಾರಿಗೆ ಬೆಂಕಿ ಆಕ್ರೋಶವನ್ನು ವ್ಯಕ್ತಪಡಿಸಿದರು. ಪ್ರಸನ್ನ ಕುಮಾರ್ ಅವರಿಗೆ ಟಿಕೆಟ್ ನೀಡಬೇಕು. ಅಭ್ಯರ್ಥಿ ಆಯ್ಕೆಯನ್ನು ಮರುಪರಿಶೀಲಿಸಿ ಎಂದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv