Breaking News

ಒಂದೇ ದಿನ ಎರಡು ಪಕ್ಷದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ.. ಕಾರ್ಯಕರ್ತರ ನಡುವೆ ವಾಗ್ವಾದ..

Cnewstv / 18.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಒಂದೇ ದಿನ ಎರಡು ಪಕ್ಷದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ.. ಕಾರ್ಯಕರ್ತರ ನಡುವೆ ವಾಗ್ವಾದ..

ಶಿವಮೊಗ್ಗ : ಇಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಒಂದೇ ದಿನ ನಾಮಪತ್ರ ಸಲ್ಲಿಸಿದ್ದಾರೆ.

ಬಿಜೆಪಿ ಪಕ್ಷದ ಅಭ್ಯರ್ಥಿ ಕೆ ಬಿ ಅಶೋಕ್ ನಾಯ್ಕ್, ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿ ಶಾರದಾ ಪೂರ್ಯನಾಯ್ಕ್ ಇಬ್ಬರು ಇಂದು ರವಿಂದ್ರ ನಗರದ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಬೃಹತ್ ಮೆರವಣಿಗೆಯ ಮೂಲಕ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

ಈ ವೇಳೆ ಕೋರ್ಟ್ ವೃತ್ತದ ಹತ್ತಿರ ಎರಡು ಪಕ್ಷದ ಕಾರ್ಯಕರ್ತರು ಮುಖಮುಖಿಯಾದರು. ಈ ವೇಳೆ
ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಬಿಜೆಪಿ ಕಾರ್ಯಕರ್ತರು ಮೋದಿ ಹಾಗೂ ಅಶೋಕ್ ನಾಯ್ಕ್ ರವರಿಗೆ ಜೈಕಾರಗಳನ್ನು ಹಾಕಿದರು. ಜೆಡಿಎಸ್ ಕಾರ್ಯಕರ್ತರು ಕುಮಾರಸ್ವಾಮಿ ಹಾಗೂ ಶಾರದಾ ಪುಯ್ಯನಾಯ್ಕ್ ರವರಿಗೆ ಜೈಕಾರಗಳನ್ನು ಹಾಕಿದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*