Breaking News

ಆಯನೂರು ಮಂಜುನಾಥ್ ನಾಳೆ ಬೆಳಿಗ್ಗೆ ನಾಮಪತ್ರ ಸಲ್ಲಿಕೆ.

Cnewstv / 19.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಆಯನೂರು ಮಂಜುನಾಥ್ ನಾಳೆ ಬೆಳಿಗ್ಗೆ ನಾಮಪತ್ರ ಸಲ್ಲಿಕೆ. ಕುಬೇರರು ಮತ್ತು ಬಲಾಢ್ಯರ ಎದುರು ಸ್ಪರ್ಧೆ 

ಶಿವಮೊಗ್ಗ : ನಾಳೆ ಬೆಳಗ್ಗೆ ಆಯನೂರು ಮಂಜುನಾಥ್ ರವರು ಶಿವಮೊಗ್ಗ ನಗರ ವಿಧಾನಸಭಾ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.‌

ಇಂದು ಮಧ್ಯಾಹ್ನ ಪರಿಷತ್‌ ಸ್ಥಾನಕ್ಕೆ ಮಧ್ಯಾಹ್ನ ರಾಜಿನಾಮೆ ನೀಡಲಿದ್ದಾರೆ. ನಾಳೆ ಬೆಳಗ್ಗೆ 10.30 ಕ್ಕೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಅದರೆ ಯಾವ ಪಕ್ಷದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬುದನ್ನು ಬಹಿರಂಗಗೊಳಿಸಿಲ್ಲ.

ಪದವೀಧರರು, ನೌಕರರು, ಕಾರ್ಮಿಕರ ಹಿತರಕ್ಷಣೆಗಾಗಿ ವಿಧಾನ ಸಭೆ ಪ್ರವೇಶ ಬಯಸಿದ್ದೇನೆ. ನಗರದ ಜನರ ಶಾಂತಿಯುತ ಬದುಕಿಗೆ ಅವಕಾಶ ಕಲ್ಪಿಸುವ ಉದ್ದೇಶ ಕೂಡ ನನ್ನದು. ಫ್ಲೆಕ್ಸ್ ನಲ್ಲಿ ಹೇಳಿದಂತೆ ಹರಕು ಬಾಯಿ ಹೊಲಿದು ಒಡೆದ ಮನಸ್ಸುಗಳನ್ನು ಒಗ್ಗೂಡಿಸುವ ನನ್ನ ಪ್ರಯತ್ನಕ್ಕೆ ಈಗಾಗಲೇ ಸ್ವಲ್ಪ ಮಟ್ಟಿಗೆ ಫಲ ದೊರೆತಿದೆ ಎಂದರು.‌ ಕುಬೇರರು ಮತ್ತು ಬಲಾಢ್ಯರ ಎದುರು ಸ್ಪರ್ಧೆ ಮಾಡುತ್ತಿದ್ದು ನಗರದ ಜನತೆ ನನ್ನ ಬೆಂಬಲಿಸಲು ಮನವಿ ಮಾಡುತ್ತೇನೆ ಎಂದು ಅವರು ಹೇಳಿದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*