Cnewstv / 19.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಚುನಾವಣಾ ತಯಾರಿಯಲ್ಲಿದ್ದ, KGF ಬಾಬು ಮನೆ ಮೇಲೆ ಐಟಿ ದಾಳಿ..
ಬೆಂಗಳೂರು : ಕೆಜಿಎಫ್ ಬಾಬು ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ಹೊತ್ತಿನಲ್ಲಿ ಅಧಿಕಾರಿಗಳು ಬೆಂಗಳೂರಿನ ಹಲವು ಕಡೆ ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಹೈ ಗ್ರೌಂಡ್ಸ್ ನಲ್ಲಿರುವ ಅವರ ಮನೆ ಹಾಗೂ ಕಛೇರಿಯ ಮೇಲೆ ಇಂದು ಬೆಳ್ಳಂ ಬೆಳಗ್ಗೆ ಐಟಿ ಅಧಿಕಾರಿಗಳು ಇಂದು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಕೆಜಿಎಫ್ ಬಾಬು ಪತ್ನಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದರು. ಕಳೆದ ವರ್ಷವೂ ಸಹ ತೆರಿಗೆ ವಂಚನೆಯಡಿ ಬಾಬು ಅವರ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv