Cnewstv / 20.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಒಂದೇ ದಿನ ಮೂರು ಪಕ್ಷದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ.
ಶಿವಮೊಗ್ಗ : 2023ರ ವಿಧಾನ ಸಭಾ ಚುನಾವಣೆಯಲ್ಲಿ ಸಾಕಷ್ಟು ಕುತೂಹಲವನ್ನು ಮೂಡಿಸಿರುವ ಕ್ಷೇತ್ರಗಳಲ್ಲಿ ಶಿವಮೊಗ್ಗ ನಗರಕ್ಷೇತ್ರ ಕೂಡ ಒಂದು. ಇಂದು ಒಂದೇ ದಿನ ಮೂರು ಪಕ್ಷದ ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಲಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಹೆಚ್ ಸಿ ಯೋಗೇಶ್ ಸ್ಪರ್ಧೆ ಮಾಡಲಿದ್ದು, ಬೆಳಗ್ಗೆ ರಾಮಣ್ಣ ಶೆಟ್ಟಿ ಪಾರ್ಕ್ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಬೃಹತ್ ಮೆರವಣಿಗೆಯ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ.
ಬಿಜೆಪಿ ಪಕ್ಷದಿಂದ ಎಸ್ ಎನ್ ಚನ್ನಬಸಪ್ಪನವರು ಕೋಟೆ ಶ್ರೀ ರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಬೃಹತ್ ಮೆರವಣಿಗೆಯ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ.
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ, ಆಯನೂರು ಮಂಜುನಾಥ್ ರವರು ಜೆಡಿಎಸ್ ಪಕ್ಷದಿಂದ ಬೆಳಗ್ಗೆ ನಾಮಪತ್ರ ಸಲ್ಲಿಸಲಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv