Breaking News

ಬಿಸಿಲಿನ ತಾಪ : ಮಾರ್ಗೋಪಾಯ ಅನುಸರಿಸಲು ಎಚ್ಚರಿಕೆ.

Cnewstv / 21.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಬಿಸಿಲಿನ ತಾಪ : ಮಾರ್ಗೋಪಾಯ ಅನುಸರಿಸಲು ಎಚ್ಚರಿಕೆ.

ಶಿವಮೊಗ್ಗ : ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಪರಿಣಾಮ ನಾವು ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಂಡು ಕೆಲವು ಮಾರ್ಗೋಪಾಯಗಳನ್ನು ಅನುಸರಿಸಬೇಕು ಇಲ್ಲವಾದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳೊಂದಿಗೆ ಮರಣ ಸಂಭವಿಸುವ ಸಾಧ್ಯತೆ ಇದೆ ಎಂದು ಆರ್‍ಸಿಹೆಚ್ ಅಧಿಕಾರಿ ಡಾ.ನಾಗರಾಜನಾಯ್ಕ ಎಚ್ಚರಿಕೆ ನೀಡಿದರು.

ಇಂದು ತುಂಗಾನಗರದ ನಗರ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಬಿಸಿಲಿನ ತಾಪಮಾನದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಬಿಸಿಲಿನ ತಾಪಮಾನದಿಂದ ವಯಸ್ಕರು, ಮಕ್ಕಳು ಹಾಗೂ ವಯೋವೃದ್ದರು ಅಪಾಯದ ಸ್ಥಿತಿಯಲ್ಲಿದ್ದು ಜೀವನ ಶೈಲಿಯಲ್ಲಿ ಬದಲಾವಣೆ ಮಾಡಿಕೊಂಡು ಕೆಲವು ಮಾರ್ಗೋಪಾಯಗಳನ್ನು ಅನುಸರಿಸಬೇಕು. ಕಡ್ಡಾಯವಾಗಿ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ವಿಶೇಷವಾಗಿ ಮಕ್ಕಳಲ್ಲಿ ಅತಿಸಾರ ಬೇಧಿ, ವೃದ್ದರಲ್ಲಿ ಸನ್‍ಸ್ಟ್ರೋಕ್, ಮಧ್ಯವಯಸ್ಕರಲ್ಲಿ ವಿಪರೀತ ತಲೆನೋವು ಹೆಚ್ಚಾಗುವ ಸಂಭವ ಇರುತ್ತದೆ. ಈ ಸಮಯದಲ್ಲಿ ಸಾಧ್ಯವಾದಷ್ಟು ಬೆಳಿಗ್ಗೆ ಹಾಗೂ ಸಾಯಂಕಾಲ ಕೆಲಸ ಮಾಡುವ ಪದ್ದತಿ ರೂಢಿಸಿಕೊಳ್ಳಬೇಕು.

ನೀರನ್ನು ಹೆಚ್ಚಾಗಿ ಸೇವಿಸಬೇಕು. ದ್ರವರೂಪದ ಆಹಾರ ಪದ್ದತಿಯನ್ನು ಅಳವಡಿಸಿಕೊಳ್ಳಬೇಕು. ಕರಿದ ಎಣ್ಣೆಯ ಪದಾರ್ಥಗಳನ್ನು ಉಪಯೋಗಿಸದೇ ಇರುವುದು ಆರೋಗ್ಯಕ್ಕೆ ಉತ್ತಮ. ಓಆರ್‍ಎಸ್ ಹೆಚ್ಚಾಗಿ ಉಪಯೋಗಿಸಬೇಕು. ನಿರ್ಲಕ್ಷ್ಯ ವಹಿಸಿದರೆ ಮರಣ ಸಂಭವದ ಸಾಧ್ಯತೆಗಳಿದ್ದು ಎಚ್ಚರಿಕೆಯನ್ನು ವಹಿಸಬೇಕೆಂದು ಅವರು ತಿಳಿಸಿದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*