Cnewstv / 24.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಮಹಾನಗರ ಪಾಲಿಕೆ ಸದಸ್ಯ ಧೀರಜ್ ಹೊನ್ನವಿಲೆ ಜೆಡಿಎಸ್ ಪಕ್ಷ ಸೇರ್ಪಡೆ..
ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್ ರವರು ಬಿಜೆಪಿ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷವನ್ನು ಸೇರ್ಪಡೆಯಾಗಿ ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಸ್ಪರ್ಧಿಯಾಗಿ ಕಣದಲ್ಲಿದ್ದಾರೆ. ಇದೇ ಬೆನ್ನಲ್ಲೇ ಬೋವಿ ಸಮಾಜದ ಮುಖಂಡರು, ಮಹಾನಗರ ಪಾಲಿಕೆಯ ಸದಸ್ಯರಾದ ಧೀರಜ್ ಹೊನ್ನವಿಲೆಯವರು ಬಿಜೆಪಿ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಮಹಾನಗರ ಪಾಲಿಕೆಯ ಚುನಾವಣೆಯಲ್ಲೂ ಸಹ ಬಿಜೆಪಿ ಪಕ್ಷದ ಟಿಕೆಟ್ ನೀಡದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದ ನಂತರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಈ ಬಾರಿಯೂ ಕೂಡ ಧೀರಜ್ ಹೊನ್ನವಿಲೆಯವರು ಶಿವಮೊಗ್ಗ ಗ್ರಾಮಾಂತರ ಭಾಗದ ಪ್ರಬಲ ಆಕಾಂಕ್ಷಿಗಳಲ್ಲಿ ಒಬ್ಬರಾಗಿದ್ದರು.
ಇಂದು ಆಯನೂರು ಮಂಜುನಾಥ, ಶಿವಮೊಗ್ಗ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಶ್ರೀಕಾಂತ್ ಹಾಗೂ ಶಾರದಾ ಪೂರ್ಯ ನಾಯಕ್ ಅವರ ನೇತೃತ್ವದಲ್ಲಿ ಜೆ.ಡಿ.ಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv