Cnewstv / 25.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಜೆಡಿಎಸ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
ಶಿವಮೊಗ್ಗ : ಜೆಡಿಎಸ್ ಜಿಲ್ಲಾ ಹಿರಿಯ ಉಪಾಧ್ಯಕ್ಷ ರಾಜೀನಾಮೆ ನೀಡಿರುವುದಾಗಿ ಮಹಾನಗರ ಪಾಲಿಕೆ ಸದ್ಯ ಆರ್.ಎಸ್. ಸತ್ಯನಾರಾಯಣ ರಾಜ್ ತಿಳಿಸಿದರು.
ಅವರು ಇಂದು ಮೀಡಿಯಾ ಹೌಸ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹಾನಗರ ಪಾಲಿಕೆ ಸದಸ್ಯನಾಗಿರುವ ನನ್ನನ್ನು ಈ ಹಿಂದೆ ಜೆಡಿಎಸ್ ಜಿಲ್ಲಾ ಹಿರಿಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಇದುವರೆಗೆ ನಿಷ್ಠಾವಂತ ಕಾರ್ಯಕರ್ತನಾಗಿ ಕಾರ್ಯನಿರ್ವಹಿಸಿದ್ದೇನೆ. ನನ್ನ ವೈಯಕ್ತಿಕ ಕಾರಣದಿಂದಾಗಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದರು.
ಮೇ ೧ರಂದು ನಡೆಯುವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ನನ್ನ ಮುಂದಿನ ನಿರ್ಧಾರ ಪ್ರಕಟಿಸುತ್ತೇನೆ. ನಾನು ಪ್ರಜಾಧ್ವನಿ ಸಂಘಟನೆಯಲ್ಲಿದ್ದು, ಅಲ್ಲಿನ ಹಿರಿಯರ ಮತ್ತು ಸದಸ್ಯರ ಅಭಿಪ್ರಾಯ ಪಡೆದು ನಿರ್ಧಾರ ಕೈಗೊಳ್ಳುತ್ತೇನೆ ಎಂದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv