Cnewstv / 01.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಅಮಿತ್ ಶಾ ರೋಡ್ ಶೋ, ಸದರಿ ಮಾರ್ಗ ಬದಲಾವಣೆ..
ಶಿವಮೊಗ್ಗ : ಕೇಂದ್ರ ಗೃಹ ಸಚಿವರಾದ ಅಮಿತ್ ಶಾ, ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ, ಶಿವಮೊಗ್ಗ ನಗರದಲ್ಲಿ ರೋಡ್ ಶೋ ನೆಡಸಲಿದ್ದು, ರೋಡ್ ಶೋ ಅನ್ನು ಶಿವಪ್ಪ ನಾಯಕ ವೃತ್ತದಿಂದ ಪ್ರಾರಂಭಿಸಿ, ಅಮೀರ್ ಅಹಮದ್ ವೃತ್ತ, ನೆಹರು ರಸ್ತೆ, ಗೋಪಿ ವೃತ್ತ, ದುರ್ಗಿ ಗುಡಿ ಮುಖ್ಯ ರಸ್ತೆ, ಜೈಲ್ ವೃತ್ತ, ಜೈಲ್ ರಸ್ತೆ ಮುಖಾಂತರ ಬಂದು ಲಕ್ಷ್ಮೀ ಟಾಕೀಸ್ ವೃತ್ತದಲ್ಲಿ ಮುಕ್ತಾಯ ಮಾಡಲಿರುತ್ತಾರೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 03:00 ರಿಂದ ಸಂಜೆ 07:00 ಗಂಟೆಯವರೆಗೆ ಬಿಹೆಚ್ ರಸ್ತೆಯ ಕರ್ನಾಟಕ ಸಂಘ, ಶಿವಪ್ಪ ನಾಯಕ ವೃತ್ತ, ಅಮೀರ್ ಅಹಮ್ಮದ್ ವೃತ್ತದ ಗೋಪಿ ವೃತ್ತ, ಜೈಲ್ ವೃತ್ತ, ಲಕ್ಷ್ಮೀ ಟಾಕೀಸ್ ವರೆಗೆ ಶೂನ್ಯ ಸಂಚಾರ ಮಾರ್ಗವಾಗಿರುತ್ತದೆ ಮತ್ತು ಸದರಿ ರಸ್ತೆಗಳಲ್ಲಿ ಯಾವುದೇ ವಾಹನಗಳ ನಿಲುಗಡೆ (ಪಾರ್ಕಿಂಗ್) ಗೆ ಅವಕಾಶವಿರುವುದಿಲ್ಲ. ಸುಗಮ ಸಂಚಾರದ ದೃಷ್ಠಿಯಿಂದ ಸಾರ್ವಜನಿಕರು ಸದರಿ ಮಾರ್ಗಗಳನ್ನು ಹೊರತು ಪಡಿಸಿ, ಬದಲೀ ಮಾರ್ಗಗಳನ್ನು ಬಳಸಲು ಕೋರಲಾಗಿದೆ.
ರೋಡ್ ಶೋ ನಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಫ್ರೀಡಂ ಪಾರ್ಕ್ ಮೈದಾನ, ಎನ್ಇಎಸ್ ಮೈದಾನ ಮತ್ತು ಸೈನ್ಸ್ ಕಾಲೇಜ್ ಮೈದಾನದಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ತಮ್ಮ ವಾಹನಗಳನ್ನು ಸದರಿ ಸ್ಥಳಗಳಲ್ಲಿ ಪಾರ್ಕಿಂಗ್ (ನಿಲುಗಡೆ) ಮಾಡುವುದು ಎಂದು ತಿಳಿಸಲಾಗಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv