Cnewstv / 01.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಶಿವಮೊಗ್ಗದಲ್ಲಿ ಅಮಿತ್ ಶಾ ಭರ್ಜರಿ ರೋಡ್ ಶೋ..
ಶಿವಮೊಗ್ಗ : ಚುನಾವಣಾ ಚಾಣಕ್ಯ ಎಂದೇ ಕರೆಯುವ ಗೃಹ ಸಚಿವ ಅಮಿತ್ ಶಾ ರವರ ರೋಡ್ ಶೋ ಶಿವಮೊಗ್ಗದಲ್ಲಿ ಭರ್ಜರಿಯಾಗಿ ನಡೆಯಿತು.

ಸಂಜೆ ಶಿವಮೊಗ್ಗದ ಶಿವಪ್ಪ ನಾಯಕ ವೃತ್ತದಿಂದ ಆರಂಭವಾದ ರೋಡ್ ಷೋ ಅಮೀರ್ ಅಹಮದ್ ವೃತ್ತ, ನೆಹರು ರಸ್ತೆ, ಗೋಪಿ ವೃತ್ತ, ದುರ್ಗಿ ಗುಡಿ ಮುಖ್ಯ ರಸ್ತೆ, ಜೈಲ್ ವೃತ್ತ, ಜೈಲ್ ರಸ್ತೆ ಮುಖಾಂತರ ಫ್ರೀಡಂ ಪಾರ್ಕಿನವರೆಗೆ ನಡೆಯಿತು. ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿ ಎಸ್ ಎನ್ ಚನ್ನಬಸಪ್ಪ, ಸಂಸದ ರಾಘವೇಂದ್ರ ಅವರು ಅಮಿತ್ ಶಾ ಗೆ ಸಾಥ್ ನೀಡಿದ್ದರು. ರೋಡ್ ಷೋ ನಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv