Breaking News

ಅರಗ ಕ್ಷೇತ್ರದಲ್ಲಿ ಕಾಂಗ್ರೆಸ್ ಮತಭೇಟೆ.‌ ಬೃಹತ್ ಪ್ರಚಾರ ಸಭೆಗೆ ಭಾಗಿಯಾಗಲಿರುವ ರಾಹುಲ್ ಗಾಂಧಿ.

Cnewstv / 02.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಅರಗ ಕ್ಷೇತ್ರದಲ್ಲಿ ಕಾಂಗ್ರೆಸ್ ಮತಭೇಟೆ.‌ ಬೃಹತ್ ಪ್ರಚಾರ ಸಭೆಗೆ ಭಾಗಿಯಾಗಲಿರುವ ರಾಹುಲ್ ಗಾಂಧಿ.

ಶಿವಮೊಗ್ಗ : ಗೃಹಸಚಿವ ಅರಗ ಜ್ಞಾನೇಂದ್ರ ರವರ ಕ್ಷೇತ್ರವಾದ ತೀರ್ಥಹಳ್ಳಿಯಲ್ಲಿ ಇಂದು ಕಾಂಗ್ರೆಸ್ ಮತಭೇಟೆಯನ್ನು ನಡೆಸಲಿದ್ದು, ಬೃಹತ್ ಪ್ರಚಾರ ಸಭೆಗೆ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ರಾಹುಲ್ ಗಾಂಧಿಯವರು ತೀರ್ಥಹಳ್ಳಿಗೆ ಆಗಮಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಪರವಾಗಿ ಪ್ರಚಾರ ನಡೆಸಲಿದ್ದಾರೆ. ನಂತರ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಈ ಬಾರಿ ತೀರ್ಥಹಳ್ಳಿ ಕ್ಷೇತ್ರವನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದು, ರಾಹುಲ್ ಗಾಂಧಿ ಭೇಟಿ ಇಂದ ಮತ್ತಷ್ಟು ಬದಲಾವಣೆಗಳು ಆಗುವ ಸಾಧ್ಯತೆ ಇದೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*