Breaking News

ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ನನ್ನ ಕೊಡುಗೆ ಇದೆ..

Cnewstv / 03.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ನನ್ನ ಕೊಡುಗೆ ಇದೆ..

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ನನ್ನ ಕೊಡುಗೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದರು. ‌

ಇಂದು ಶಿವಮೊಗ್ಗದ ಎನ್ಇಎಸ್ ಮೈದಾನದಲ್ಲಿ ಜೆಡಿಎಸ್ ಬಹಿರಂಗ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳಿಗೆ ನೀವೆಲ್ಲರೂ ಬೆಂಬಲ ನೀಡಬೇಕು. ಕಳೆದು ಆರು ತಿಂಗಳಿಂದ ನಿರಂತರವಾಗಿ ರಾಜ್ಯ ಪ್ರವಾಸ ಮಾಡಿದ್ದೇನೆ.

ರಾಜ್ಯದ ಜನರ ಬದುಕಿಗಾಗಿ ಏಕಾಂಗಿ ಹೋರಾಟ ಮಾಡುತ್ತಿದ್ದೇನೆ. ಪಂಚರತ್ನ ಯೋಜನೆ ಅನುಷ್ಟಾನಕ್ಕೆ ಅಧಿಕಾರ ನೀಡಿ ಎಂದು ಜನರ ಮುಂದೆ ಹೋಗುತ್ತಿದ್ದೇನೆ. ಅದು ನನ್ನ ವೈಯಕ್ತಿಕ ಲಾಭಕ್ಕಾಗಿ ಅಲ್ಲ..ರಾಜ್ಯದ ಜನರ ಹಿತಕ್ಕಾಗಿ. ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ನನ್ನ ಕೊಡುಗೆ ಇದೆ ಎಂದರು.‌

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*