Breaking News

ತಮಿಳು ಸಮಾಜದ ಯುವಕರಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೆಚ್. ಸಿ.ಯೋಗೇಶ್ ಅವರಿಗೆ ಸಂಪೂರ್ಣ ಬೆಂಬಲ.‌

Cnewstv / 05.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ತಮಿಳು ಸಮಾಜದ ಯುವಕರಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೆಚ್. ಸಿ.ಯೋಗೇಶ್ ಅವರಿಗೆ ಸಂಪೂರ್ಣ ಬೆಂಬಲ.‌

ಶಿವಮೊಗ್ಗ : ಇಂದು ಶಿವಮೊಗ್ಗ ನಗರದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಕಚೇರಿಯಲ್ಲಿ ನಗರದ ತಮಿಳು ಸಮಾಜದ ಯುವ ಮುಖಂಡರು ಹಾಗೂ ಯುವಕರು ಸಭೆ ಸೇರಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರದ ಉದ್ಯೋಗ ಸೃಷ್ಟಿಯ ಸುಳ್ಳು ಭರವಸೆಗಳನ್ನು ಧಿಕ್ಕರಿಸಿ ಶಿವಮೊಗ್ಗ ನಗರದಲ್ಲಿ ಶಾಂತಿ ಸುವ್ಯವಸ್ಥೆಗಾಗಿ ಕಾಂಗ್ರೆಸ್ ಪಕ್ಷವನ್ನು ಹಾಗೂ ಶಿವಮೊಗ್ಗ ನಗರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯುವ ನಾಯಕ ಹೆಚ್.ಸಿ. ಯೋಗೇಶ್ ಅವರನ್ನು ಸಂಪೂರ್ಣವಾಗಿ ಬೆಂಬಲಿಸಲು ನಿರ್ಣಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ತಮಿಳು ಸಮಾಜದ ಯುವ ಮುಖಂಡರುಗಳಾದ ಸಂದೀಪ್ ಸುಂದರರಾಜ್, ಎಸ್ ಕುಮಾರೇಶ್, ಮಲ್ಲೇಶ್ ಜಟ್ಪಟ್ ನಗರ, ರಾಮನಾಥ್ ಬುದ್ಧನಗರ, ಪುರಲೆ ಕಾರ್ತಿಕ್, ಹಾಗೂ ತಮಿಳು ಸಮಾಜದ ನೂರಾರು ಯುವಕರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯೋಗೇಶ್ ಅವರಿಗೆ ಅಭಿನಂದಿಸಿದರು

ಸಭೆಯಲ್ಲಿ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ಜಿಲ್ಲಾ ಯುವ ಕಾಂಗ್ರೆಸ್ ನ ಅಧ್ಯಕ್ಷ ಹೆಚ್.ಪಿ. ಗಿರೀಶ್ ,ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಮ್ ಪಾಷಾ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್, ಹಾಗೂ ಇತರರು ಇದ್ದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*