Breaking News

ಬಾಲಕಾರ್ಮಿಕ ಹಾಗೂ ಕಿಶೋರರು ಪತ್ತೆ

Cnewstv / 06.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಬಾಲಕಾರ್ಮಿಕ ಹಾಗೂ ಕಿಶೋರರು ಪತ್ತೆ

ಶಿವಮೊಗ್ಗ : ಶಿವಮೊಗ್ಗ ನಗರದ ದುರ್ಗಿಗುಡಿ, ಪಾರ್ಕ್ ಬಡಾವಣೆ, ಜೈಲ್ ಸರ್ಕಲ್‍ಗಳಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಕ್ಕಳ ಸಹಾಯವಾಣಿ, ಪೊಲೀಸ್ ಇಲಾಖೆ ಸಹಯೋಗದಲ್ಲಿ ಮೇ 03 ರಂದು ತಪಾಸಣೆಯನ್ನು ಕೈಗೊಳ್ಳಲಾಗಿದ್ದು 01 ಬಾಲಕಾರ್ಮಿಕ ಹಾಗೂ 02 ಕಿಶೋರರು ಕಂಡು ಬಂದಿರುತ್ತಾರೆ.

ಮಾಲೀಕನ ವಿರುದ್ಧ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಉಲ್ಲಂಘನೆ ಕುರಿತು ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಲಾಗಿದೆ. ಸದರಿ ಬಾಲಕರನ್ನು ಮಕ್ಕಳ ಕಲ್ಯಾಣ ಸಮಿತಿಯಲ್ಲಿ ಹಾಜರುಪಡಿಸಲಾಗಿದ್ದು, ತಪಾಸಣೆಯಲ್ಲಿ ಇತರೆ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಬಾಲಕಾರ್ಮಿಕ ಕಾಯ್ದೆಯ ಕುರಿತು ಅರಿವು ಮೂಡಿಸಲಾಯಿತು.

ತಪಾಸಣೆಯಲ್ಲಿ ಕಾರ್ಮಿಕ ಅಧಿಕಾರಿ ಸುಮ ಹೆಚ್.ಎಸ್, 2ನೇ ವೃತ್ತದ ಕಾರ್ಮಿಕ ನಿರೀಕ್ಷಕ ಭೀಮೇಶ್ ಪಿ, ಯೋಜನಾ ನಿರ್ದೇಶಕ ರಘುನಾಥ ಎ.ಎಸ್ ಮತ್ತು ಮಕ್ಕಳ ಸಹಾಯವಾಣಿ ಸಿಬ್ಬಂದಿ ಪ್ರಮೋದ್ ಹಾಜರಿದ್ದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*