Breaking News

ಮತ ಎಣಿಕೆ ಕೇಂದ್ರದೊಳಗೆ ಹೋಗುವ ಏಜೆಂಟರ್ ಹಾಗೂ ಇತರ ವ್ಯಕ್ತಿಗಳು ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.‌

Cnewstv / 12.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಮತ ಎಣಿಕೆ ಕೇಂದ್ರದೊಳಗೆ ಹೋಗುವ ಏಜೆಂಟರ್ ಹಾಗೂ ಇತರ ವ್ಯಕ್ತಿಗಳು ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.‌

ಶಿವಮೊಗ್ಗ : ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ( ಮೇ 13ರಂದು ಶನಿವಾರ ) ನಾಳೆ ಬೆಳಿಗ್ಗೆ 8 ಗಂಟೆಯಿಂದ ಪ್ರಾರಂಭವಾಗಲಿದ್ದು, ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಮತ ಎಣಿಕಾ ಕೇಂದ್ರದ ಒಳಗಡೆ ಮೊಬೈಲ್ ಫೋನ್‌, ಡಿಜಿಟಲ್‌ ವಾಚ್‌ ಮತ್ತು ಇತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಮತ ಎಣಿಕಾ ಕೇಂದ್ರಕ್ಕೆ ಬರುವ ಚುನಾವಣಾ ಏಜೆಂಟರ್ ಗಳು ಮತ್ತು ಇತರೆ ವ್ಯಕ್ತಿಗಳು ಮೊಬೈಲ್ ಫೋನ್, ಡಿಜಿಟಲ್‌ ವಾಚ್‌ ಮತ್ತು ಇತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಯಾವುದೇ ಕಾರಣಕ್ಕೂ ತರುವಂತಿರುವುದಿಲ್ಲ.

ಏಜೆಂಟರು ಮತ್ತು ಎಲ್ಲಾ ಇಲಾಖೆಯ ಅಧಿಕಾರಿಗಳ ವಾಹನಗಳನ್ನು ಸಹ್ಯಾದ್ರಿ ಸೈನ್ಸ್ ಕಾಲೇಜು ಎದುರು, ವಜ್ರ ಮಹೋತ್ಸವ ಕಟ್ಟಡದ ಎದುರು ಮತ್ತು ಬಿ.ಹೆಚ್. ರಸ್ತೆಗೆ ಹೊಂದಿಕೊಂಡಂತಿರುವ ಮ್ಯಾಚ್ ಫ್ಯಾಕ್ಟರಿಗೆ ಸೇರಿದ ಮೈದಾನದಲ್ಲಿ ಪಾರ್ಕಿಂಗ್ ಮಾಡಬಹುದು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*