ಚುನಾವಣಾ ದಿನಾಂಕ ಘೋಷಣೆ ಯಾಗುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಶಿಕಾರಿಪುರ ತಾಲೂಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿ.ವೈ.ರಾಘ ವೇಂದ್ರ ಅಭ್ಯರ್ಥಿ ಎಂದು ಘೋಷಿಸಿ ದರು. ನಿನ್ನೆ ನಗರದ ಬಿಜೆಪಿ ಕಾರ್ಯಾ ಲಯದಲ್ಲಿ ನಡೆದ ಕೋರ್‌ಕಮಿಟಿ ಸಭೆಯಲ್ಲಿ ಬಿ.ವೈ.ರಾಘವೇಂದ್ರ ಅಭ್ಯರ್ಥಿಯಾಗಿರುವುದನ್ನು ಅಧಿಕೃತ ಘೋಷಿಸಲಾಗಿದೆ. ಇದರಿಂದಾಗಿ ಬಿಜೆಪಿಯಲ್ಲಿ ಅಭ್ಯರ್ಥಿ ಯಾರು ಎಂಬ ಗೊಂದಲಗಳಿಗೆ ತೆರೆ ಬಿದ್ದಂತಾ ಗಿದೆ. ಇನ್ನು ಕಾಂಗ್ರೆಸ್ ಹಾಗೂ ಜೆಡಿಎಸ್‌ನಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆಂಬುದು ಕುತೂಹಲದ ಅಂಶವಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರ ನಡೆಸುತ್ತಿದ್ದು, ಉಪ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಐದು ತಿಂಗಳ ಅವಧಿಗೆ ಎರಡೂ ಪಕ್ಷಗಳಲ್ಲಿ ಸ್ಪರ್ಧಿಸಲು ಯಾರೂ ಸಹ ಒಲವು ತೋರಿಸುತ್ತಿಲ್ಲ ಎನ್ನಲಾಗಿದೆ.
ಈ ಬಾರಿಯ ಉಪಚುನಾವಣೆ ಯಲ್ಲಿ ಜೆಡಿಎಸ್, ಕಾಂಗ್ರೆಸ್‌ಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡ ಲಾಗುತ್ತಿದೆ ಎನ್ನಲಾಗಿದ್ದು, ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅಥವಾ ಕಿಮ್ಮನೆ ರತ್ನಾಕರ್‌ರವರು ಅಭ್ಯರ್ಥಿ ಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ಈ ನಡುವೆ ಬಿ.ವೈ.ರಾಘವೇಂದ್ರ ರವರಿಗೆ ಪ್ರಬಲ ಸ್ಪರ್ಧೆಯನ್ನು ಒಡ್ಡುವ ನಿಟ್ಟಿನಲ್ಲಿ ಮಂಜುನಾಥ ಭಂಡಾರಿಯೇ ಸೂಕ್ತ ಎಂಬ ಅಭಿಪ್ರಾಯ ಕಾಂಗ್ರೆಸ್ ವಲಯದಲ್ಲಿ ವ್ಯಕ್ತವಾಗುತ್ತಿದ್ದು, ಕಾಂಗ್ರೆಸ್, ಜೆಡಿಎಸ್ ಮೈತ್ರಿಯಾದರೆ ಭಂಡಾರಿ ಯವರೇ ಅಭ್ಯರ್ಥಿಯಾಗುವುದು ಸೂಕ್ತ ಎಂಬ ಅಭಿಪ್ರಾಯ ಕಾಂಗ್ರೆಸ್ ನಾಯಕರಲ್ಲಿ ಕೇಳಿಬರುತ್ತಿದೆ ಎನ್ನಲಾಗಿದೆ.
ಒಂದು ವೇಳೆ ಶಿವಮೊಗ್ಗ ಲೋಕ ಸಭಾ ಕ್ಷೇತ್ರವನ್ನು ಕಾಂಗ್ರೆಸ್, ಜೆಡಿಎಸ್‌ಗೆ ಬಿಟ್ಟುಕೊಡುವುದಾದರೆ ಆ ಪಕ್ಷದಿಂದ ಮಧುಬಂಗಾರಪ್ಪ ರವರು ಅಭ್ಯರ್ಥಿಯಾಗುವುದು ಖಚಿತ ಎನ್ನಲಾಗುತ್ತಿದೆ. ಒಟ್ಟಾರೆ ಶಿವಮೊಗ್ಗ ಲೋಕಸಭಾ ಉಪಚುನಾ ವಣೆಯ ಕಾವು ಇದೀಗ ಏರತೊಡ ಗಿದ್ದು, ಕಾಂಗ್ರೆಸ್, ಜೆಡಿಎಸ್‌ನಿಂದ ಅಭ್ಯರ್ಥಿ ಯಾರೆಂಬುದು ಕುತೂಹಲದ ಅಂಶವಾಗಿದೆ.
C News TV Kannada News Online in cnewstv