Cnewstv / 13.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಯಾರಾಗುತ್ತಾರೆ ಕಾಂಗ್ರೆಸ್ ಮುಂದಿನ ಮುಖ್ಯಮಂತ್ರಿ ??
ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಯಶಸ್ಸು ಸಾಧಿಸಿದೆ. ಬಿಜೆಪಿಯ ತೆಕ್ಕೆಯಲ್ಲಿದಂತಹ ಕರ್ನಾಟಕವನ್ನು ಕಾಂಗ್ರೆಸ್ನ ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ಆಡಳಿತರೂಢ ಬಿಜೆಪಿ ಪಕ್ಷದ ಪ್ರಮುಖರು ಸೋಲು ಅನುಭವಿಸಿದ್ದಾರೆ.
ಕಾಂಗ್ರೆಸ್ 138 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಬಿಜೆಪಿ 64 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಜೆಡಿಎಸ್ 19 ಕ್ಷೇತ್ರಗಳಲ್ಲಿ ಹಾಗೂ ಮೂವರು ಇತರೆ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ರಾಜ್ಯದ ಈ ಚುನಾವಣೆಯ ಫಲಿತಾಂಶ, ಕರ್ನಾಟಕ ರಾಜ್ಯದಲ್ಲಿ ಮಾತ್ರವಲ್ಲದೆ ದೇಶದ ರಾಜಕೀಯದಲ್ಲಿ ಸಹ ಸಾಕಷ್ಟು ಬದಲಾವಣೆಗಳನ್ನು ಮಾಡಬಹುದು ಎಂದು ಹೇಳಲಾಗುತ್ತಿದೆ. ಲೋಕಸಭಾ ಚುನಾವಣೆಗೆ ಕೇವಲ ಒಂದು ವರ್ಷ ಮಾತ್ರ ಬಾಕಿ ಇರುವ ಹಿನ್ನೆಲೆಯಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದು ಕೂಡ ಅತ್ಯಂತ ಗಮನಹ ಸಂಗತಿಯಾಗಿದ್ದು ಎಲ್ಲರಿಗೂ ಸಹ ಕುತೂಹಲವನ್ನು ಮೂಡಿಸಿದೆ.
ಸದ್ಯ ರಾಜ್ಯ ಕಾಂಗ್ರೆಸ್ಸಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ಕೂಡ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಹಾಗಾಗಿ ಮೊದಲ ಎರಡುವರೆ ವರ್ಷ ಸಿದ್ದರಾಮಯ್ಯ ಹಾಗೂ ಉಳಿದ ಎರಡುವರೆ ವರ್ಷ ಡಿಕೆ ಶಿವಕುಮಾರ್ ಅವರು ಅಧಿಕಾರವನ್ನು ಹಂಚಿಕೊಳ್ಳಲು ನಿರ್ಧರಿಸಬಹುದು ಎಂದು ಹೇಳಲಾಗುತ್ತಿದೆ. ಅಲ್ಲದೇ ಹೈಕಮಾಂಡ್ ಕೂಡ ಇದೇ ಸಲಹೆಯನ್ನು ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv