ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಪ್ರಮುಖರ ವಿಶೇಷ ಸಭೆಯಲ್ಲಿ ಶಾಸಕ ಕೆ.ಎಸ್.ಈಶ್ವರಪ್ಪ ನವರು ಬಿ.ವೈ. ರಾಘವೇಂದ್ರ ಹೆಸರನ್ನು ಪ್ರಸ್ತಾಪಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ. ಭಾನುಪ್ರಕಾಶ ಅನುಮೋದಿಸುವ ಮೂಲಕ ರಾಘವೇಂದ್ರ ಹೆಸರನ್ನು ಅಂತಿಮಗೊಳಿಸಲಾಯಿತು. ಬಳಿಕ ಮಾಜಿ ಸಭಾಪತಿ ಡಿ.ಎಸ್.ಶಂಕರಮೂರ್ತಿ ರಾಘವೇಂದ್ರರನ್ನು ಅಭಿನಂದಿಸಿ ಮಾತನಾಡಿ, ಪಕ್ಷದ ಅಭ್ಯರ್ಧಿಯನ್ನು ಸರ್ವಾನುಮತದಿಂದ ಗೆಲ್ಲಿಸುವ ಹೊಣೆಗಾರಿಕೆ ನಮ್ಮೆಲ್ಲರದ್ದಾಗಿದೆ. ಈ ನಿಟ್ಟಿನಲ್ಲಿ ಮುಖಂಡರು, ಎಲ್ಲಾ ಕಾರ್ಯಕರ್ತರು ಕಾರ್ಯ ಪ್ರವೃತ್ತರಾಗಬೇಕು ಎಂದು ಹೇಳಿದರು. ಸಭೆಯಲ್ಲಿ ಮಾತನಾಡಿದ ಬಿ.ಜೆ.ಪಿ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ, ಉಪ ಚುನಾವಣೆಗೆ ರಾಘವೇಂದ್ರ ರವರನ್ನು ಈ ಕ್ಷೇತ್ರದಿಂದ ಅಯ್ಕೆ ಮಾಡಲಾಗಿದೆ, ಅವರು ಅ.15 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದ್ದರು..
C News TV Kannada News Online in cnewstv