Cnewstv / 29.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಅರ್ಜಿ ಆಹ್ವಾನ
ಶಿವಮೊಗ್ಗ : 2023-24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಮೊದಲು ಪಿ.ಯು.ಸಿ ಹಂತದಿಂದಲೇ ಕೋಚಿಂಗ್ ನೀಡುತ್ತಿರುವ ಕಾಲೇಜುಗಳಿಗೆ ಹೊಸ ಪ್ರತಿಷ್ಠಿತ ಶಾಲೆಗಳನ್ನು ಗುರುತಿಸಿ ಮಾನ್ಯತೆ ನೀಡಲು ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ.
ಆಸಕ್ತರು ಉಪನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರವರ ಕಚೇರಿ, ಸಮಾಜ ಕಲ್ಯಾಣಿ ಇಲಾಖೆಯಲ್ಲಿ ಜೂ.01 ರ ಒಳಗಾಗಿ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಶಿವಮೊಗ್ಗ ಹಾಗೂ ತಾಲ್ಲೂಕಿನ ಎಲ್ಲಾ ಸಹಾಯಕ ನಿರ್ದೇಶಕರು (ಗ್ರೇಡ್-1&2) ರ ಕಚೇರಿ, ಸಮಾಜ ಕಲ್ಯಾಣ ಇಲಾಖೆಯನ್ನು ಖುದ್ದಾಗಿ ಅಥವಾ ದೂ. ಸಂ. : 08182-249241 ನ್ನು ಸಂಪರ್ಕಿಸುವುದು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399