Breaking News

ರಾಜ್ಯಾದ್ಯಂತ ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ.

Cnewstv / 30.05.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ರಾಜ್ಯಾದ್ಯಂತ ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ.

ಬೆಂಗಳೂರು : ರಾಜ್ಯಾದ್ಯಂತ ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಘೋಷಣೆ ಮಾಡಲಾಯಿತು.

ಇಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು, ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ನಮ್ಮ ಪ್ರಣಾಳಿಕೆಯಲ್ಲಿ ನಾವು ಎಪಿಎಲ್- ಬಿಪಿಎಲ್ ಎಂದು ಹೇಳಿಲ್ಲ. ಮಹಿಳೆಯರು ಸರ್ಕಾರಿ ರಾಜ್ಯದಾದ್ಯಂತ ಉಚಿತವಾಗಿ ಪ್ರಯಾಣಿಸಿಬಹುದು ಎಂದರು.

ಇಂದಿನ ಸಭೆಯಲ್ಲಿ ಸಾಧಕ ಬಾಧಕಗಳ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಭೆಯ ವರದಿ ಸಲ್ಲಿಸುತ್ತೇವೆ. ನಮ್ಮ ಸಾರಿಗೆ ಇಲಾಖೆ ದೇಶದಲ್ಲೇ ಪ್ರತಿಷ್ಠಿತ ಸಂಸ್ಥೆಯಾಗಿದೆ. ನಿತ್ಯ ರಾಜ್ಯಾದ್ಯಂತ 82,51 ಲಕ್ಷ ಪ್ರಯಾಣಿಕರು ಓಡಾಡ್ತಾರೆ. ನಾಲ್ಕು ನಿಗಮಗಳ ನಿತ್ಯದ ಒಟ್ಟು ಆದಾಯ 2,31,332 ಲಕ್ಷ ರೂ. ಇದೆ ಎಂದು ತಿಳಿಸಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*