Cnewstv / 31.05.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಬೆಳ್ಳಂ ಬೆಳಗ್ಗೆ ಶಿವಮೊಗ್ಗ ಹಾಗೂ ಶಿಕಾರಿಪುರದಲ್ಲಿ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ.
ಶಿವಮೊಗ್ಗ : ಇಂದು ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್ ಪ್ರಶಾಂತ್ ಮನೆ ಹಾಗೂ ತೋಟದ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಆದಾಯಕ್ಕೂ ಮೀರಿ ಆಸ್ತಿ ಹೊಂದಿದ್ದಾರೆ ಎಂಬ ಆರೋಪದ ಅಡಿಯಲ್ಲಿ ಶಿವಮೊಗ್ಗ ಶರಾವತಿ ನಗರ ಶೆಟ್ಟಿಹಳ್ಳಿ ಹಾಗೂ ಶಿಕಾರಿಪುರದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.. ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.
ಶಿಕಾರಿಪುರದಲ್ಲೂ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ..
ಇಂದು ಬೆಳ್ಳಂ ಬೆಳಗ್ಗೆ ಶಿಕಾರಿಪುರ ತಾಲೂಕಿನ ಜಿಲ್ಲಾ ಪಂಚಾಯತ್ ಇಂಜಿನಿಯರ್ ಶಂಕರ್ ನಾಯ್ಕ್ ಅವರ ಶಾಂತಿನಗರದಲ್ಲಿರುವ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv