Cnewstv / 3.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಮಾಜಿ ಶಾಸಕ ನಿಧನ..
ಶಿವಮೊಗ್ಗ : ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ವಕೀಲರಾದ ಬಿ ಧರ್ಮಪ್ಪ ರವರು ವಯೋಸಹಜ ನಿಧನರಾಗಿದ್ದಾರೆ.
ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು ಶುಕ್ರವಾರ ಸಂಜೆ 3.40 ರ ಸಮಯದಲ್ಲಿ ಕೊನೆಯುಸಿರೆಳೆದರು.ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿ ಧರ್ಮಪ್ಪ ರವರು 1985 ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಎಲ್ ಟಿ ತಿಮ್ಮಪ್ಪ ರವರ ವಿರುದ್ದ 1500 ಮತಗಳ ಅಂತರದಿಂದ ಜಯಗಳಿಸಿದ್ದರು.
ಮೂಲತಃ ಸಾಗರ ತಾಲೂಕಿನ ತಂಗಳವಾಡಿಯವರಾದ ಇವರು ಪ್ರಸ್ತುತ ಬೆಂಗಳೂರಿನಲ್ಲಿ ಕುಟುಂಬದೊಂದಿಗೆ ನೆಲೆಸಿದ್ದರು.ಕೆಲವು ದಿನಗಳ ಹಿಂದೆ ಆರೋಗ್ಯದಲ್ಲಿ ವ್ಯತ್ಯಯ ಉಂಟಾದ ಹಿನ್ನಲೆಯಲ್ಲಿ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇಂದು ಅವರ ಸ್ವಗ್ರಾಮವಾದ ತಂಗಳವಾಡಿಯಲ್ಲಿ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments