Cnewstv / 15.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಜೂ.27 ರೊಳಗಾಗಿ ಪಡಿತರ ಪಡೆಯಲು ಸೂಚನೆ.
ಶಿವಮೊಗ್ಗ : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಲ್ಲಿ ಸರ್ವರ್ ನಿರ್ವಹಣಾ ಕಾರ್ಯವನ್ನು ಜೂ.28 ರಿಂದ ಕೈಗೊಳ್ಳಲಿದ್ದು, ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಜೂನ್-2023ರ ಮಾಹೆಯ ಪಡಿತರವನ್ನು ದಿ: 27/06/2023 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಿಂದ ಪಡೆದುಕೊಳ್ಳುವಂತೆ ಶಿವಮೊಗ್ಗ ತಾಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಶಿವಮೊಗ್ಗ ತಾಲೂಕು ಗ್ರಾಮಾಂತರ ವ್ಯಾಪ್ತಿಯ ಎಲ್ಲಾ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಜೂ. 27ರೊಳಗಾಗಿ ಪಡಿತರ ವಿತರಣಾ ಕಾರ್ಯವನ್ನು ಕಡ್ಡಾಯವಾಗಿ ಮುಕ್ತಾಯಗೊಳಿಸುವಂತೆ ಹಾಗೂ ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ಕಡ್ಡಾಯವಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ನೋಂದಾಯಿಸಿಕೊಳ್ಳಲು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments