Cnewstv / 17.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
“ಉಚಿತ ಅಕ್ಕಿ ಗ್ಯಾರೆಂಟಿ” ಕಾಂಗ್ರೆಸ್ – ಬಿಜೆಪಿ ಬೀದಿಕಾಳಗ.
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಉಚಿತ ಅಕ್ಕಿ ಗ್ಯಾರಂಟಿ ಯೋಜನೆಯ ವಿಚಾರದ ನಡುವಿನ ಕಾಂಗ್ರೆಸ್ ಬಿಜೆಪಿಯ ಬೀದಿ ಕಾಳಗ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ.
ಪಡಿತರ ಕಾರ್ಡ್ ಹೊಂದಿದ ಪ್ರತಿ ವ್ಯಕ್ತಿಗೆ ಜುಲೈ ತಿಂಗಳಿನಿಂದ 10 ಕೆಜಿ ಅಕ್ಕಿ ಉಚಿತವಾಗಿ ಕೊಡುವುದಾಗಿ ಕಾಂಗ್ರೆಸ್ ಸರ್ಕಾರ ಚುನಾವಣಾ ಸಂದರ್ಭದಲ್ಲಿ ತಿಳಿಸಿತ್ತು. ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಬಿಡುತ್ತಿಲ್ಲ, ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ರಾಜ್ಯ ಸರ್ಕಾರ ಕೇಂದ್ರ ಸರ್ಕಾರವನ್ನ ಬೆಟ್ಟು ಮಾಡಿ ತೋರಿಸುತ್ತಿದೆ.
ಕೊಟ್ಟ ಮಾತಿನಂತೆ 10 ಕೆಜಿ ಅಕ್ಕಿಯನ್ನು ಕೊಡದಿದ್ದರೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡುವುದಾಗಿ ಬಿಜೆಪಿ ಎಚ್ಚರಿಕೆಯನ್ನು ನೀಡಿದೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಗ್ಯಾರಂಟಿಯನ್ನು ಘೋಷಣೆ ಮಾಡುವ ಮೊದಲು ಕೇಂದ್ರ ಸರ್ಕಾರಕ್ಕೆ ಗಮನಕ್ಕೆ ತಂದಿಲ್ಲ. ಕೇಂದ್ರ ಸರ್ಕಾರ ಮುಂದಿನ ಪರಿಸ್ಥಿತಿಯನ್ನು ನೋಡಿಕೊಂಡು ತೀರ್ಮಾನ ಮಾಡುತ್ತದೆ ಎಂಬ ಪರಿಜ್ಞಾನವೇ ಕಾಂಗ್ರೆಸ್ ಸರಕಾರಕ್ಕೆ ಇರ್ಲಿಲ್ವಾ ಎಂದು ಬಿಜೆಪಿ ವಾಗ್ದಾಳಿ ನಡೆಸಿದರ.
ಗ್ಯಾರೆಂಟಿ ಅಕ್ಕಿ ವಿಚಾರವಾಗಿ ಕಾಂಗ್ರೆಸ್ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರದ 10 ಕೆಜಿ ಅಕ್ಕಿ ನೀಡುವ ಮಹತ್ವದ ಯೋಜನೆಗಳಲ್ಲಿ ಒಂದಾದ ಅನ್ನ ಭಾಗ್ಯ ಯೋಜನೆ ಮುಂದುವರೆಯಲಿದೆಯ ಇಲ್ಲವೋ ಎನ್ನುವುದು ಎಂದು ಸಂಜೆಯ ಒಳಗಾಗಿ ತಿಳಿಯಲಿದೆ
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments