Cnewstv / 17.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ.
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಪಡೆಯಲು ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಇಲಾಖೆಯ ವೆಬ್‍ಸೈಟ್ www.tw.kar.nic.in ರಲ್ಲಿ ಅರ್ಜಿ ಸಲ್ಲಿಸಿ, ಹಾರ್ಡ್‍ಕಾಪಿಯನ್ನು ದಾಖಲಾತಿಗಳೊಂದಿಗೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-279222 / 9482762350 ಗಳನ್ನು ಸಂಪರ್ಕಿಸುವುದು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments