Cnewstv / 18.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ತುಂಗಾ ನದಿಯಲ್ಲಿ ಇಬ್ಬರು ಯುವಕರು ನೀರುಪಾಲು
ತೀರ್ಥಹಳ್ಳಿ : ತೀರ್ಥಹಳ್ಳಿ ತಾಲೂಕು ತೀರ್ಥಮುತ್ತೂರು ಮಠದ ಮುಂಭಾಗ ಇರುವ ಹೋಂ ಸ್ಟೇಯಲ್ಲಿ ಉಳಿದಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಇಂದು ನಡೆದಿದೆ.
ಶನಿವಾರ ಪ್ರವಾಸಕ್ಕೆ ಬಂದಿದ್ದ ಕಾರ್ಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಬಾಲಾಜಿ ಹಾಗೂ ಪುನೀತ್ ನೀರುಪಾಲಾದ ದುರ್ದೈವೆಗಳು. ಇಬ್ಬರು ಇಲ್ಲಿನ ಹೋಂ ಸ್ಟೇ ಅಲ್ಲಿ ತಂಗಿದ್ದರು. ಈ ವೇಳೆ ಈಜಲು ನದಿಗೆ ಇಳಿದು ನಾಪತ್ತೆಯಾಗಿದ್ದಾರೆ. ಇದರಲ್ಲಿ ಒಬ್ಬರ ಮೃತ ದೇಹ ದೊರೆತಿದ್ದು, ಇನ್ನೊಬ್ಬರ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರೆದಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv