Cnewstv / 19.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಅನ್ನಭಾಗ್ಯ ಯೋಜನೆ ಜಾರಿಗೆ 2.38 ಲಕ್ಷ ಟನ್ ಅಕ್ಕಿ ಕೊರತೆ..
ಬೆಂಗಳೂರು : ಅನ್ನಭಾಗ್ಯ ಯೋಜನೆ ಜಾರಿಗೆ 2.38 ಲಕ್ಷ ಟನ್ ಅಕ್ಕಿ ಕೊರತೆ ಎದುರಾಗಿದೆ. ನೆರೆ ರಾಜ್ಯಗಳಿಂದಲೂ ಅಕ್ಕಿ ಪಡೆಯಲು ಸಾಧ್ಯವಾಗುತ್ತಿಲ್ಲ. ಛತ್ತೀಸ್‌ಗಢ ರಾಜ್ಯದಲ್ಲಿ ದಾಸ್ತಾನು ಇದೆ. ಆದರೆ, ಅದಕ್ಕೆ ಸಾಗಣೆ ವೆಚ್ಚವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.
ಸುದ್ದಿಗಾರರೊಂದಿಗೆ ಅವರು, ತೆಲಂಗಾಣ, ಆಂಧ್ರಪ್ರದೇಶ ಮತ್ತು ಛತ್ತೀಸ್‌ಗಢದಿಂದ ಅಕ್ಕಿ ನೀಡುವಂತೆ ಮಾತನಾಡಿದರು. ಆದರೆ, ತೆಲಂಗಾಣ ಮನವಿಯನ್ನು ತಿರಸ್ಕರಿಸಿದೆ, ಆಂಧ್ರಸರ್ಕಾರ ಕೂಡ ಮುಂದೆ ಬಂದಿಲ್ಲ. ಛತ್ತೀಸ್‌ಗಢ ಸರ್ಕಾರವು ಸುಮಾರು 1.5 ಲಕ್ಷ ಟನ್ ಅಕ್ಕಿಯನ್ನು ಪೂರೈಸುವುದಾಗಿ ಭರವಸೆ ನೀಡಿದೆ, ಸಾಗಣೆಯ ವೆಚ್ಚವು ಹೆಚ್ಚಾಗಿದೆ ಎಂದು ಹೇಳಿದರು.
ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ಈ ಯೋಜನೆ ಬಡವರಿಗಾಗಿ ಆಗಿದೆ. ಈ ಹಿಂದೆ ಮನವಿ ಮಾಡಿಕೊಂಡಾಗ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿಯನ್ನು ಒಪ್ಪಿದ್ದರು. ಆದರೆ ನಂತರ ಸಾಧ್ಯವಿಲ್ಲ ಎಂದು ಉತ್ತರಿಸಿದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments