Cnewstv / 21.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ತರಬೇತಿಗಾಗಿ ಅರ್ಜಿ ಆಹ್ವಾನ: ಅವಧಿ ವಿಸ್ತರಣೆ
ಶಿವಮೊಗ್ಗ : ಶಿವಮೊಗ್ಗದ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ ಸಂಸ್ಥೆಯು ಜು.01 ರಿಂದ 06 ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಯನ್ನು ಪ್ರಾರಂಭಿಸಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳಿಂದ ಮತ್ತು ಸಹಕಾರ ಸಂಘ/ಬ್ಯಾಂಕ್‍ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜೂನ 30ರವರೆಗೆ ವಿಸ್ತರಿಸಲಾಗಿದೆ.
ಅರ್ಜಿಯನ್ನು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ವಿನೋಬನಗರ ಇಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08182-248873 ಹಾಗೂ 7022429440 ನ್ನು ಸಂಪರ್ಕಿಸಬಹುದೆಂದು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್‍ನ ಪ್ರಾಂಶುಪಾಲರು ತಿಳಿಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments