Breaking News

ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ, ಒಬ್ಬರಿಗೆ ಗಂಭೀರ ಗಾಯ

Cnewstv / 24.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ, ಒಬ್ಬರಿಗೆ ಗಂಭೀರ ಗಾಯ

ಶಿವಮೊಗ್ಗ : ಗಾಜನೂರು ಸಮೀಪ ಕಾರು ಮತ್ತು ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿಯಾಗಿವೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ಕಾರು, ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಖಾಸಗಿ ಬಸ್‌ ಮಧ್ಯೆ ಅಪಘಾತವಾಗಿದೆ.

ಗಾಜನೂರಿನ ಮೊರಾರ್ಜಿ ಶಾಲೆ ಬಳಿ ಓವರ್‌ ಟೇಕ್‌ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಎದುರಿನಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ.

ಕಾರಿನಲ್ಲಿದ್ದ ನಾಲ್ವರ ಪೈಕಿ ಒಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಮೂವರಿಗೆ ಸಣ್ಣಪುಟ್ಟ ಗಾಯವಾಗಿದೆ. ಎಲ್ಲರನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.‌

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*