Cnewstv / 28.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ರಾಜ್ಯದಲ್ಲಿ ಎಷ್ಟು ಶಿಕ್ಷಕರ ಹುದ್ದೆ ಖಾಲಿ ಇದೆ ಗೊತ್ತಾ ?? ಪ್ರಸಕ್ತ ಸಾಲಿನ ವರ್ಗಾವಣೆಗೆ ಅರ್ಜಿ ಸಲ್ಲಿಸಿದ ಶಿಕ್ಷಕರೇಷ್ಟು ??
ಶಿವಮೊಗ್ಗ : ಮಂಗಳವಾರ ತೀರ್ಥಹಳ್ಳಿಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ರಾಜ್ಯ ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಮಧು ಎಸ್.ಬಂಗಾರಪ್ಪ ಅವರು ಸಮಾಲೋಚನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 57000 ಶಿಕ್ಷಕರ ಹುದ್ದೆ ಖಾಲಿ ಇದ್ದು, ತಕ್ಷಣದ ಕ್ರಮವಾಗಿ ಹಾಗೂ ನ್ಯಾಯಾಲಯದ ಸೂಚನೆಯಂತೆ 13000 ಶಿಕ್ಷಕರ ನೇಮಕಾತಿಗೆ ಕ್ರಮ ವಹಿಸಲಾಗಿದೆ ಎಂದರು.
ಪ್ರಸಕ್ತ ಸಾಲಿನ ಶಿಕ್ಷಕರ ವರ್ಗಾವಣೆಗೆ ಸುಮಾರು 87000 ಶಿಕ್ಷಕರು ಅರ್ಜಿ ಸಲ್ಲಿಸಿದ್ದು , ಅದರಲ್ಲಿ 25000 ಶಿಕ್ಷಕರು ವರ್ಗಾವಣೆ ಯಾಗಲಿದ್ದಾರೆ. ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಅಡಚಣೆಯಾಗದಂತೆ ಈ ಪ್ರಕ್ರಿಯೆ ನಡೆಯಲಿದೆ ಎಂದರು.
ಶಿಕ್ಷಕರ ನೇಮಕಾತಿಯಲ್ಲಿ ಅತಿ ಜೆಚ್ಚಿನ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳು ನೇಮಕಗೊಳ್ಳುತ್ತಿರುವುದು ವಿಶೇಷ. ಅಲ್ಲದೆ ಶಿಕ್ಷಕರ ಕೊರತೆಯನ್ನು ನೀಗಿಸಲು ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು.
ಸಭೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments