Cnewstv / 03.072023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಶಿವಮೊಗ್ಗ : ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡೇಟು..
ಶಿವಮೊಗ್ಗ : ಶಿವಮೊಗ್ಗ ನಗರದ ಹೊರವಲಯದಲ್ಲಿ ರೌಡಿಶೀಟರ್ ಸೈಫುಲ್ಲಾ ಖಾನ್ ಅಲಿಯಾಸ್ ಸೈಫು ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ.
ಶಿವಮೊಗ್ಗ ತಾಲೂಕಿನ ಅಯನೂರು ಸಮೀಪದ ದೊಡ್ಡದಾನವಂದಿ ಗ್ರಾಮದ ಹತ್ತಿರ ಈ ಘಟನೆ ನಡೆದಿದೆ. ಪ್ರಕರಣ ಒಂದರಲ್ಲಿ ಬಂಧನಕ್ಕೆ ತೆರಳಿದ ವೇಳೆ ಪೊಲೀಸರ ಮೇಲೆ ಸೈಫು ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಜಯನಗರ ಪಿಎಸ್ಐ ನವೀನ್ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ ಆದರೂ ಕೂಡ ಮಾತು ಕೇಳದೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ವೇಳೆ ಕಾಲಿಗೆ ಶಾಟ್ ಫೈರ್ ಮಾಡಿದ್ದಾರೆ.
ಗಾಯಾಳು ಸೈಫುನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಗೊಂಡಂತಹ ಪೋಲಿಸ್ ಸಿಬ್ಬಂದಿಯನ್ನು ಹೆಚ್ಚಿನ ಚಿಕಿತ್ಸೆ ಎಂದು ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ರೌಡಿಶೀಟರ್ ಸೈಫುಲ್ಲಾ ಖಾನ್ ಮೇಲೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ 16 ಪ್ರಕರಣಗಳು. ತುಂಗಾ ನಗರ ಹಾಗೂ ಜಯನಗರ ಠಾಣೆಯಲ್ಲಿ ತಳ ಒಂದು ಪ್ರಕರಣಗಳು ಇದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv