Cnewstv / 06.07.2023 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇನ್ನೂ ಮುಂದೆ ಪ್ರತಿ ತಿಂಗಳ 3ನೇ ಶನಿವಾರ “ಬ್ಯಾಗ್ ರಹಿತ ದಿನ”
ಬೆಂಗಳೂರು : ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರದಂದು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
2023-24ನೇ ಸಾಲಿನಲ್ಲಿ ಒಂದರಿಂದ ಎಂಟನೇ ತರಗತಿಯ ಮಕ್ಕಳು ಪ್ರತೀ ತಿಂಗಳ ಶನಿವಾರದಂದು ಬ್ಯಾಗ್ ರಹಿತ ದಿನವನ್ನು ಸಂಭ್ರಮಿಸುವಂತೆ ಡಿಎಸ್‌ಇಆರ್‌ಟಿ ಸೂಚನೆ ನೀಡಿದೆ. ಮಕ್ಕಳ ಸಂತಸದಾಯಕ ಕಲಿಕೆ ಮತ್ತು ಪಠ್ಯದ ಹೊರೆ ಇಳಿಸುವ ಉದ್ದೇಶದಿಂದ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ.
ಘನತ್ಯಾಜ್ಯ ನಿರ್ವಹಣೆ, ಸುರಕ್ಷಿತ ತಂತ್ರಜ್ಞಾನ ಬಳಕೆ, ಸುರಕ್ಷತೆ ಮತ್ತು ಭದ್ರತೆ, ಸಾರ್ವಜನಿಕ ಸೌಕರ್ಯ, ರಸ್ತೆ ಸುರಕ್ಷತೆ, ಸ್ವಾಸ್ಥ್ಯ ಮತ್ತು ಶುಚಿತ್ವ, ಮಾದಕವಸ್ತು, ಲಿಂಗ ಸಮಾನತೆ, ಆರೋಗ್ಯಕರ ಜೀವನಶೈಲಿ ಸೇರಿದಂತೆ ಇತರ ವಿಷಯಗಳ ಕುರಿತು ಮಕ್ಕಳಿಗೆ ತಿಳಿಸಿಕೊಡಲಾಗುವುದು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv