Breaking News

ರಾಜ್ಯದ ಬಜೆಟ್‌ ಪುಸ್ತಕ ಅನ್ನುವುದಕ್ಕಿಂತ ಬಿಜೆಪಿಯ ನಿಂದನಾ ಪುಸ್ತಕ ಎಂದರೆ ಸರಿಯಾದೀತು – ಎಚ್‌.ಡಿ.ಕುಮಾರಸ್ವಾಮಿ.

Cnewstv / 08.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ರಾಜ್ಯದ ಬಜೆಟ್‌ ಪುಸ್ತಕ ಅನ್ನುವುದಕ್ಕಿಂತ ಬಿಜೆಪಿಯ ನಿಂದನಾ ಪುಸ್ತಕ ಎಂದರೆ ಸರಿಯಾದೀತು – ಎಚ್‌.ಡಿ.ಕುಮಾರಸ್ವಾಮಿ.

ಬೆಂಗಳೂರು : ಹಿಂದೆ ಬಸವರಾಜ ಬೊಮ್ಮಾಯಿ ಅವರು ಲೇಖಾನುದಾನ ಪಡೆದಿದ್ದರು. ಅದರ ಮುಂದುವರಿದ ಭಾಗವೇ ಈ ಬಜೆಟ್‌. ಇದನ್ನು ಬಜೆಟ್‌ ಪುಸ್ತಕ ಅನ್ನುವುದಕ್ಕಿಂತ ಬಿಜೆಪಿಯ ನಿಂದನಾ ಪುಸ್ತಕ ಎಂದರೆ ಸರಿಯಾದೀತು. ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ಬಸವರಾಜ ಬೊಮ್ಮಾಯಿಯವರ ಕಾಲದಲ್ಲಿ ನೀರಾವರಿ ಇಲಾಖೆಗೆ 1 ಲಕ್ಷ ಕೋಟಿ ರೂ. ಯೋಜನೆಗಳಿಗೆ ಅನುಮತಿ ಕೊಟ್ಟಿದ್ಧಾರೆ. ಅದಕ್ಕೆ ಈಗ 40 ಸಾವಿರ ಕೋಟಿ ರೂ. ಹೆಚ್ಚುವರಿ ಸೇರ್ಪಡೆ ಆಗಿದೆ. 1 ಲಕ್ಷ 75 ಸಾವಿರ ಕೋಟಿ ರೂ. ಮೊತ್ತದ ಯೋಜನೆಗಳಿಗೆ ಹಣವಿಡದೆ ಘೋಷಿಸಿದ್ಧಾರೆ. 2013 -18ರಿಂದ 15 ಲಕ್ಷ ಮನೆ ಕಟ್ಟಿದ್ದೀವಿ ಎಂದು ಹೇಳಿದ್ಧಾರೆ. ಎಲ್ಲಿ ಕಟ್ಟಿದ್ಧಾರೆ, ಇನ್ನು 12 ಲಕ್ಷ ಮನೆ ಕಟ್ಟಲು 17,815 ಕೋಟಿ ರೂ. ಬೇಕು ಎಂದು ಹೇಳಿದ್ಧಾರೆ. ಅದನ್ನು ಎಲ್ಲಿಂದ ತರುತ್ತಾರೆ. ಈಗ ನೋಡಿದರೆ ಆರ್ಥಿಕ ಶಿಸ್ತನ್ನು ಹಾಳು ಮಾಡಿದ್ಧಾರೆ ಎಂದು ಆರೋಪಿಸಿದ್ಧಾರೆ.

ಇದು ಕೇವಲ ಕೇಂದ್ರ ಸರ್ಕಾರ-ಹಿಂದಿನ ಸರ್ಕಾರವನ್ನು ದೂಷಣೆ ಮಾಡುವ ಬಜೆಟ್‌ ಅಷ್ಟೇ. ಇದರಲ್ಲಿ ಏನೂ ಇಲ್ಲ ಎಂದು ಕುಮಾರಸ್ವಾಮಿ ದೂರಿದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*