Cnewstv / 17.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಜೀರೋ ಟ್ರಾಫಿಕ್ ಮೂಲಕ ಶಿವಮೊಗ್ಗದಿಂದ ಬೆಂಗಳೂರಿನ ಆಸ್ಪತ್ರೆಗೆ ಮಗು ಶಿಫ್ಟ್.
ಶಿವಮೊಗ್ಗ : ಜೀರೋ ಟ್ರಾಫಿಕ್ ಮೂಲಕ ಶಿವಮೊಗ್ಗದಿಂದ ಬೆಂಗಳೂರಿನ ಆಸ್ಪತ್ರೆಗೆ ಮಗುವನ್ನು ತಡರಾತ್ರಿ ಶಿಫ್ಟ್ ಮಾಡಲಾಗಿದೆ.
ಶಿವಮೊಗ್ಗದ ಸರ್ಜಿ ಮಕ್ಕಳ ಆಸ್ಪತ್ರೆಯಲ್ಲಿ ಜನಿಸಿದ್ದ ಮಗು.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಮಗುವಿನ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಜೀರೋ ಟ್ರಾಫಿಕ್ ಮೂಲಕ ಬೆಂಗಳೂರಿಗೆ ಶಿಫ್ಟ್ ಮಾಡಲಾಯಿತು.
ಶಿವಮೊಗ್ಗದ ಗಾಂಧಿ ಬಜಾರ್ ನ ನಿಲೇಶ್ ಜೈನ್ ಮತ್ತು ಮೋನಿಕಾ ದಂಪತಿಗಳ ಮೂರು ದಿನದ ಮಗುವಿಗೆ ತೆರೆದ ಹೃದಯದ ಆಪರೇಶನ್ ಅಗತ್ಯವಿತ್ತು. ಶಿವಮೊಗ್ಗದ ಸರ್ಜಿ ಆಸ್ಪತ್ರೆಯಿಂದ ಬೆಂಗಳೂರಿನ ಎನ್ ಎಚ್ ಆಸ್ಪತ್ರೆಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಮೂಲಕ ರವಾನೆ ಮಾಡಲಾಯಿತು.
ಎಸ್ಪಿ ಮಿಥುನ್ ಕುಮಾರ್ ರವರು ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದರು. ಶಿವಮೊಗ್ಗದಿಂದ ರಾತ್ರಿ 10.08 ಕ್ಕೆ ಹೊರಟು ಅ್ಯಂಬುಲೆನ್ಸ್ ರಾತ್ರಿ 1.40 ಕ್ಕೆ ಬೆಂಗಳೂರು ಆಸ್ಪತ್ರೆಗೆ ತಲುಪಿದೆ.
ಚಾಲಕ ಜಗದೀಶ್ ಹಾಗೂ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv