Breaking News

ಮಣಿಪುರದಲ್ಲಿ ಭುಗಿಲೆದ್ದ ಆಕ್ರೋಶ..ಇಬ್ಬರು ಕುಕಿ ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋ ವೈರಲ್.

Cnewstv / 20.07.2023 / ದೆಹ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಮಣಿಪುರದಲ್ಲಿ ಭುಗಿಲೆದ್ದ ಆಕ್ರೋಶ..ಇಬ್ಬರು ಕುಕಿ ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋ ವೈರಲ್.

ಹೊಸದಿಲ್ಲಿ: ಗಲಭೆಗ್ರಸ್ತ ಮಣಿಪುರದಲ್ಲಿ (Manipur violence) ಇನ್ನಷ್ಟು ಅಮಾನುಷ, ಪೈಶಾಚಿಕ ಸುದ್ದಿಗಳು ಬರುತ್ತಿವೆ. ಮೇ 4ರಂದು ನಡೆದಿದೆ ಎನ್ನಲಾದ ಭೀಕರ ಘಟನೆಯ ಒಂದು ವಿಡಿಯೋ ಸೋಶಿಯಲ್‌ ಮೀಡಿಯಾಗಳಲ್ಲಿ ಹಂಚಿಕೆಯಾಗುತ್ತಿದ್ದು, ಈದರಿಂದ ಇನ್ನೊಂದು ಸುತ್ತಿನ ಗಲಭೆ ಹೊತ್ತಿಕೊಂಡಿದೆ.

ಬುಡಕಟ್ಟು ಕುಕೀ ಸಮುದಾಯದ ಇಬ್ಬರು ಮಹಿಳೆಯರನ್ನು ಮೈತೈ ಕಿಡಿಗೇಡಿಗಳ ಗುಂಪು ಬೆತ್ತಲೆ ಮೆರವಣಿಗೆ ಮಾಡಿದ್ದು, ಬಳಿಕ ಅತ್ಯಾಚಾರ ಎಸಗಿದ್ದಾರೆ ಎಂದು ಬುಡಕಟ್ಟು ಸಮುದಾಯ ಆರೋಪ ಮಾಡಿದೆ. ಈ ವಿಡಿಯೋ ಕುಕೀಗಳಲ್ಲಿ ಆಕ್ರೋಶ ಕೆರಳಿಸಿದ್ದು, ಮತ್ತೊಂದು ಸುತ್ತಿನ ಹಿಂಸಾಚಾರಕ್ಕೆ ನಾಂದಿಯಾಗಿದೆ. ಈ ವಿಡಿಯೋ ವಾಟ್ಸ್ಯಾಪ್‌ ಮುಂತಾದ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.

ಇಂಪಾಲ್‌ನಿಂದ 35 ಕಿಲೋಮೀಟರ್ ದೂರದ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇಬ್ಬರು ಮಹಿಳೆಯನ್ನು ಕಿಡಿಗೇಡಿಗಳ ಗ್ಯಾಂಗ್ ಬೆತ್ತಲೆಗೊಳಿಸಿದೆ. ಬಳಿಕ ಗಲಭೆಕೋರರು ದಾರಿಯಲ್ಲಿ ಮೆರವಣಿಗೆ ಮಾಡಿಸಿದ್ದಾರೆ. ಬೆತ್ತಲೆಗೊಳಿಸಿದ ಮಹಿಳೆಯರ ಮೇಲೆ ಆಕ್ರೋಶಿತರ ಗುಂಪು ಗ್ಯಾಂಗ್ ರೇಪ್ ಕೂಡ ಮಾಡಿದೆ ಎಂದು ಬುಡಕಟ್ಟು ಸಮುದಾಯ ಆರೋಪಿಸಿದೆ. ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಮತ್ತೆ ಹಿಂಸಾಚಾರ ಆರಂಭಗೊಂಡಿದೆ.

ಸತತ ಎರಡು ತಿಂಗಳುಗಳಿಂದ ಜನಾಂಗೀಯ ಸಂಘರ್ಷಕ್ಕೆ ಸಾಕ್ಷಿಯಾಗಿರುವ ಮಣಿಪುರದಲ್ಲಿ 2 ತಿಂಗಳಿಂದ ಮುಚ್ಚಿದ್ದ ಶಾಲೆಗಳು ಇತ್ತೀಚೆಗಷ್ಟೇ ಪುನಾರಂಭವಾಗಿತ್ತು. ಸತತ ಪ್ರಯತ್ನಗಳ ಬಳಿಕ ಸುದೀರ್ಘ ಹಿಂಸಾಚಾರ ತಣ್ಣಗಾಗಿತ್ತು. ಇದೀಗ ಈ ಭೀಕರ ಘಟನೆ ವಿಡಿಯೋ ಬಹಿರಂಗೊಂಡಿರುವುದು ಬುಡಕಟ್ಟು ಸಮುದಾಯಗಳನ್ನು ಮತ್ತಷ್ಟು ಕೆರಳಿಸಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್, ಮಣಿಪುರ ಹಿಂಸಾಚಾರ ಕುರಿತು ವಿಚಾರಣೆ ನಡೆಸಿತ್ತು. ‘ಮಣಿಪುರದಲ್ಲಿ ಮತ್ತಷ್ಟು ಕಿಚ್ಚು ಹಚ್ಚಲು ಸುಪ್ರೀಂ ಕೋರ್ಟನ್ನು ವೇದಿಕೆ ಆಗಿ ಬಳಸಿಕೊಳ್ಳಬೇಡಿ’ ಎಂದು ಸರ್ವೋಚ್ಚ ನ್ಯಾಯಾಲಯವು, 2 ತಿಂಗಳಿಂದ ಜನಾಂಗೀಯ ಸಂಘರ್ಷದಲ್ಲಿ ತೊಡಗಿರುವ ಮೈತೇಯಿ ಹಾಗೂ ಕುಕಿ ಸಮುದಾಯಗಳಿಗೆ ಎಚ್ಚರಿಕೆ ನೀಡಿತ್ತು. ಆದರೆ ಇದೀಗ ಮತ್ತೆ ಗಲಭೆ ಸೂಚನೆಗಳು ವ್ಯಕ್ತವಾಗುತ್ತಿವೆ. ಮಣಿಪುರದ ವಸ್ತುಸ್ಥಿತಿ ವರದಿ ಸಲ್ಲಿಸಿದ ರಾಜ್ಯ ಸರ್ಕಾರ, 142 ಜನರು ಗಲಭೆಯಲ್ಲಿ ಸಾವನ್ನಪ್ಪಿದ್ದಾರೆ. 5,995 ಎಫ್‌ಐಆರ್‌ ದಾಖಲಾಗಿದ್ದು, 6745 ಜನರನ್ನು ಬಂಧಿಸಲಾಗಿದೆ. 6 ಕೇಸುಗಳ ತನಿಖೆಯನ್ನು ಸಿಬಿಐ ನಡೆಸುತ್ತಿದೆ ಎಂದು ಹೇಳಿತ್ತು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*