Cnewstv / 20.07.2023 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿಯಿಂದ ಪ್ರತಿಭಟನೆ. ರಾಜ್ಯಪಾಲರಿಗೆ ದೂರು
ಬೆಂಗಳೂರು : ಬಿಜೆಪಿ 10 ಜನ ಶಾಸಕರ ಅಮಾನತು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ಸದಸ್ಯರು ಕಲಾಪವನ್ನು ಬಹಿಷ್ಕರಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.
ಮಾಜಿ ಸಿಎಂ ಬೊಮ್ಮಾಯಿ, ಅರ್ ಅಶೋಕ್, ಅರಗ ಜ್ಞಾನೇಂದ್ರ, ಸುನಿಲ್ ಕುಮಾರ್ ಸೇರಿದಂತೆ ಹಲವರು ಶಾಸಕರು ಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು.
ವಿಧಾನಸೌಧದ ಒಳಗೆ ಪ್ರಜಾಪ್ರಭುತ್ವದ ಖಗ್ಗೊಲೆ ಆಗಿದೆ ಎಂದು ಆರೋಪಿಸಿದ್ದರರು. ಅಷ್ಟೇ ಅಲ್ಲದೆ ಶನಿವಾರ ರಾಜ್ಯಾದ್ಯಂತ ಕಾಂಗ್ರೆಸ್ ನ ಸರ್ವಾಧಿಕಾರಿ ಧೋರಣೆಯನ್ನ ಖಂಡಿಸಿ ಪ್ರತಿಭಟನೆಗೆ ಬಿಜೆಪಿ ಕರೆ ನೀಡಿದೆ. ವಿಧಾನಸೌಧದಿಂದ ರಾಜಭವನದವರೆಗೆ ಪಾದಯಾತ್ರೆಯ ಮೂಲಕ ಹೋಗಿ ಸ್ಪೀಕರ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv